ಭಟ್ಕಳ: ಪಟ್ಟಣದ ಮದೀನಾ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಮುಖ್ಯೋಪಾಧ್ಯಾಯ ಗಾಲಿಬ್ ಅವಟಿ ಅವರು ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಭಟ್ಕಳ ತಾಲ್ಲೂಕು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿದ್ಯಾಭ್ಯಾಸ ಕ್ಷೇತ್ರದಲ್ಲಿ ನೀಡಿದ ಸೇವೆ, ವಿದ್ಯಾರ್ಥಿಗಳಲ್ಲಿ ಕಲಿಕೆ ಆಸಕ್ತಿ ಬೆಳೆಸುವ ನಿಷ್ಠೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೋರಿದ ತಾತ್ಪರ್ಯಕ್ಕೆ ಮಾನ್ಯತೆ ರೂಪವಾಗಿ ಈ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಪಡೆದ ಸಂತಸದ ಸಂದರ್ಭದಲ್ಲಿ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಂIIಖಿA) ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಅಲಿ ಮನೆಗಾರ್, ಕಾರ್ಯದರ್ಶಿ ಮುಜಾವರ್ ಕುಮಟಾ, ಭಟ್ಕಳ ತಾಲೂಕು ಅಧ್ಯಕ್ಷ ಸಾದಿಕ್ ಶೇಖ್ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದರು.
About The Author


More Stories
ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ್ ಕಚೇರಿಗೆ ಮನವಿ
ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬಿಸಿ ಮುಟ್ಟಿಸಿದ ಎಎಸ್ಪಿ ರಾನು ಗುಪ್ತ: 6 ಟಿಪ್ಪರ್ಗಳು, 6 ಮಂದಿ ವಶಕ್ಕೆ
ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯರಿಗೆ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಸನ್ಮಾನ