October 5, 2025

ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಸಂಪನ್ನ

ಭಟ್ಕಳ : ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಸೆಪ್ಟೆಂಬರ್ 18 ರಂದು ಜರುಗಿತು.

ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹಾಗೂ ಮುಖ್ಯ ಅತಿಥಿಯನ್ನು ಪ್ರಾಂಶುಪಾಲರಾದ ಶ್ರೀನಾಥ್ ಪೈರವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸ್ಯ ಮತ್ತು ಜೀವನ ಮೌಲ್ಯಗಳ ಉಪನ್ಯಾಸಕರಾದ ಶ್ರೀಮತಿ ಸಂಧ್ಯಾ ಶೆಣೈ ಉಡುಪಿ ರವರು ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಂದೆ ತಾಯಿಯ ವರ ಶ್ರಮವು ಮಹತ್ವದಾಗಿದ್ದು, ವಿದ್ಯಾರ್ಥಿಗಳು ಇದನ್ನರಿತು ಕಾಲೇಜಿನಲ್ಲಿ ಶಿಸ್ತಿನಿಂದಿರುವ ಮೂಲಕ ಯಶಸ್ಸನ್ನು ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಮತ್ತು ಸಾಹಿತಿಗಳು ಆದ ಶ್ರೀ ಶ್ರೀಧರ್ ಶೇಟ್ ಶಿರಾಲಿ ಯವರು ಮಾತನಾಡಿ ವಿದ್ಯಾರ್ಥಿಗಳು, ನಿರಂತರ ತಾಳ್ಮೆ ಹಾಗೂ ಪ್ರಯತ್ನದಿಂದ ಜೀವನದಲ್ಲಿ ಗುರಿಯನ್ನು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಲಿ ಎಲ್.ಐ.ಸಿ ಡೆವಲಪ್ಮೆಂಟ್ ಆಫೀಸರ್ ಆಗಿರುವ ಶ್ರೀ ನಾಗರಾಜ್ ನಾಯ್ಕ್ ರವರು ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕೆಂದು ತಮ್ಮ ಕಾಲೇಜಿನ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊAಡರು.

ಭಟ್ಕಳ್ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಮ್ಯಾನೇಜರ್ ಆದ ರಾಜೇಶ್ ನಾಯಕ್ ರವರು ವಿದ್ಯಾರ್ಥಿಗಳಿಗೆ ಶುಭಕೋರಿದರು. ಅಧ್ಯಕ್ಷರಾದ ಡಾ. ಸುರೇಶ್ ನಾಯಕ್ ರವರು ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರವನ್ನು ನೀಡಿ ಗೌರವಿಸಲಾಯಿತು. ಅತಿಥಿ ಗಣ್ಯರಿಗೆ ಕಾಲೇಜಿನ ವತಿಯಿಂದ ಗೌರವ ಸಮರ್ಪಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಉಪನ್ಯಾಸಕರಾದ ಸುಬ್ರಹ್ಮಣ್ಯ ನಾಯ್ಕ್ ವಂದನಾರ್ಪಣೆಗೈದರು, ವಿದ್ಯಾರ್ಥಿನಿಯರಾದ ಕುಮಾರಿ. ಆಗ್ನೇಸ್ ರೇಗೋ ಮತ್ತು ನಮೃತಾ ಹುಲ್ಸವಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

About The Author

error: Content is protected !!