ಭಟ್ಕಳ: ನಗರದ ಸಂಶುದ್ದಿನ್ ಸರ್ಕಲ್ ಹತ್ತಿರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸುತ್ತಿದ್ದ ಯುವಕನನ್ನು ಭಟ್ಕಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.
ಬ0ಧಿತ ಆರೋಪಿ ಹನೀಪಾಬಾದ್ ನಿವಾಸಿ ಮಹ್ಮದ್ ಮಂಜೂರ್ (28) ಎಂಬಾತನು ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ ಮಾಡುತ್ತಿರುವುದು ಗಮನಕ್ಕೆ ಬಂದಿತ್ತು. ಅವನ ಬಾಯಿಂದ ಘಾಟು ವಾಸನೆ ಬರುತ್ತಿರುವುದರಿಂದ ವಿಚಾರಣೆ ನಡೆಸಿದಾಗ ಆತ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡನು ಎಂದು ಪೊಲೀಸರು ತಿಳಿಸಿದರು.
ನಂತರ ಆತನನ್ನು ಭಟ್ಕಳ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ನಗರ ಠಾಣೆ ಪಿಎಸೈ ನವೀನ್ ನಾಯ್ಕ ಪ್ರಕರಣ ದಾಖಲಿಸಿ ಕೊಂಡು ಆರೋಪಿ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ