October 5, 2025

ಭಟ್ಕಳದಲ್ಲಿ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಬೇಡಿಕೆ

ಭಟ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕೆಂದು ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದಿAದ ಭಾನುವಾರ ಸಚಿವ ಮಂಕಾಳ ವೈದ್ಯರಿಗೆ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಲಾಯಿತು.

ತಾಲೂಕಾ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಪ್ರಸ್ತುತ ಎಲ್ಲಾ ಯುನಿಟ್‌ಗಳು ತುಂಬಿ ಹೋಗಿರುವುದರಿಂದ ಬಡ ಕಾರ್ಮಿಕರು ಖಾಸಗಿ ಆಸ್ಪತ್ರೆಗಳ ಅವಲಂಬನೆಯಾಗಬೇಕಾಗಿ ಬಂದು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕನಿಷ್ಟ ಇನ್ನೆರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸಂಘದ ಪ್ರತಿನಿಧಿಗಳು ಆಗ್ರಹಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಶ್ರೀಧರ ನಾಯ್ಕ ಹೆಬಳೆ, ಉಪಾಧ್ಯಕ್ಷ ಲಚ್ಮಯ್ಯ ನಾಯ್ಕ, ಹಜರತ್ ಅಲೀ ಕಂಬಾರ್, ಪ್ರಧಾನ ಕಾರ್ಯದರ್ಶಿ ಕೃಷ್ಣ ಜಟ್ಪಪ್ಪ ನಾಯ್ಕ ಹಾಗೂ ಗೌರವಾಧ್ಯಕ್ಷ ಶ್ರೀಧರ ನಾಯ್ಕ ಚೌಥನಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

About The Author

error: Content is protected !!