October 5, 2025

ಆನಂದಾಶ್ರಮ ಪ್ರೌಢಶಾಲೆಯ ಬಂಕಿ ಕೊಡ್ಲದ ವಿದ್ಯಾರ್ಥಿಗಳು ವಾಲಿಬಾಲ್, ಕಬ್ಬಡಿ ಯಲ್ಲಿ *ವಿಭಾಗ ಮಟ್ಟಕ್ಕೆ

ಕುಮಟಾ: ಗೋಕರ್ಣ ದಿಂದ ಅನತಿ ದೂರದಲ್ಲಿರುವ ರೂರಲ್ ಎಜುಕೇಶನ್ ಸೊಸೈಟಿಯ ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಡಿ ಎಮ್ ಕಾಲೇಜು ಮೈದಾನ ಹೊನ್ನಾವರದಲ್ಲಿ ನಡೆದ 14 ವರ್ಷ ವಯೋಮಿತಿ ಒಳಗಿನ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಇಲಾಖೆ ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಗದಗದಲ್ಲಿ ನಡೆಯುವ ಬೆಳಗಾವಿ ಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .ಮತ್ತು ಪೊಲೀಸ್ ಮೈದಾನ ಕಾರವಾರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಬಾಲಕಿಯರ ಕಬ್ಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದು ಬಾಗಲಕೋಟೆಯಲ್ಲಿ ನಡೆಯುವ ಬೆಳಗಾವಿ ವಿಭಾಗ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ 5 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ., ವಿಜೇತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ದಯಾನಂದ ಗೌಡ ಇವರಿಗೆ ಶಾಲೆಯ ಮುಖ್ಯ ಅಧ್ಯಾಪಕರಾದ ಗಂಗಾಧರ್ ಭಟ್ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯ ಅಧ್ಯಕ್ಷರಾದ ಆತ್ಮರಾಮ ಬಳವಳ್ಳಿ ಕಾರ್ಯದರ್ಶಿಗಳಾದ ವಿವೇಕ್ ವಿ ನಾಡ್ಕರ್ಣಿ ಉಪ ನಿರ್ದೇಶಕರಾದ ಲತಾ ನಾಯಕ್ ಜಿಲ್ಲಾ ದೈಹಿಕ ಶಿಕ್ಷಣ ಪರೀಕ್ಷಕರಾದ ವಿಟೊಬ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉದಯ ನಾಯ್ಕ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿಜಿ ನಾಯಕ್ ಊರ ನಾಗರಿಕರು ಮುಂದಿನ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿರುತ್ತಾರೆ.

About The Author

error: Content is protected !!