
ಶಿರಸಿ; ತಾಲೂಕಿನ ಹುಲೇಕಲ್ ಗ್ರಾಮದ ಡಾ|| ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವ ಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಕಾರವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ತಾಲೂಕ ಆಸ್ಪತ್ರೆ ಶಿರಸಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹುಲೇಕಲ್, ಗ್ರೀನ್ ಕೇರ್ (ರಿ.) ಶಿರಸಿ, ಮತ್ತು ಸಂಕಲ್ಪ ಟ್ರಸ್ಟ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಯ ಶಿಬಿರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಎ.ಜಿ ವಸ್ತ್ರದ ವಹಿಸಿ ಕಣ್ಣಿನ ಆರೋಗ್ಯದ ಬಗ್ಗೆ ಮಾತನಾಡಿದರು. ಹುಲೇಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಖಾಸಿಂ ಇಬ್ರಾಹಿಂ ಸಾಬ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿ ಹಳ್ಳಿ ಜನರಿಗೆ ಇಂಥ ಶಿಬಿರಗಳಿಂದ ತುಂಬಾ ಉಪಯೋಗವಾಗುತ್ತದೆ ಎಂದರು. ಈ ಕಾರ್ಯಕ್ರಮದ ಮೊದಲು ಸೇರಿದ ಎಲ್ಲಾ ಶಿಬಿರಾರ್ಥಿಗಳಿಗೆ ಶಿರಸಿ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಮಧುಕರ್ ಪಾಟೀಲ್ ಅವರು ಕಣ್ಣಿನ ಆರೋಗ್ಯ ಮತ್ತು ರಕ್ಷಣೆಯ ಬಗ್ಗೆ ವಿವರವಾಗಿ ತಿಳಿಸಿದರು.
ರೋಟರಿ ಆಸ್ಪತ್ರೆಯ ಶಿಬಿರದ ಕಾರ್ಯಕ್ರಮ ಸಂಯೋಜಕರು ಶ್ರೀ ಗಿರೀಶ್ ಧಾರೇಶ್ವರ್ ಮಾತನಾಡಿ ಎಲ್ಲಾ ಶಿಬಿರಾರ್ಥಿಗಳಿಗೆ ಶಸ್ತ್ರ ಚಿಕಿತ್ಸೆಯ ಮೊದಲು ಮತ್ತು ನಂತರ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾ ಶಾಖೆ ಉತ್ತರ ಕನ್ನಡದ ಅಧ್ಯಕ್ಷರಾದ ಮಹೇಶ. ಡಿ. ನಾಯಕ್, ಗ್ರೀನ್ ಕೇರ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ಆರ್. ಎಂ, ಸಂಕಲ್ಪ ಟ್ರಸ್ಟ್ ಶಿರಸಿಯ ಅಧ್ಯಕ್ಷರಾದ ಕುಮಾರ ಪಟಗಾರ, ಹುಲೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಬೋಸಯ್ಯ ಸಿ.ಟಿ, ಬೈರಂಬೇ ಉಪ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರೇಮನಾಥ್, ಶಿರಸಿ ಆರೋಗ್ಯಾಧಿಕಾರಿಗಳ ಕಚೇರಿಯ ಆರ್.ಬಿ.ಎಸ್.ಕೆ ನೇತ್ರಾಧಿಕಾರಿಗಳು, ರೋಟರಿ ಆಸ್ಪತ್ರೆಯ ಸಿಬ್ಬಂದಿಗಳು, ಹುಲೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಮತ್ತು ಗ್ರೀನ್ ಕೇರ್ ಸಂಸ್ಥೆಯ ಕಚೇರಿ ನಿರ್ವಾಹಕರಾದ ಶ್ರೀಮತಿ ಅಪ್ಸಾನಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ಅವರು ನಿರೂಪಿಸಿ ವಂದಿಸಿದರು. ಶಿಬಿರದಲ್ಲಿ 180 ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ 96 ಶಿಬಿರಾರ್ಥಿ ಗಳನ್ನು ಆಯ್ಕೆ ಮಾಡಿ ಶಸ್ತ್ರಚಿಕಿತ್ಸೆ ಮಾಡಿಸಲು ರೋಟರಿ ಆಸ್ಪತ್ರೆಗೆ ಆಸ್ಪತ್ರೆಯ ಬಸ್ಸಿನಲ್ಲಿ ಕರೆದುಕೊಂಡು ಹೋಗಲಾಯಿತು.
More Stories
ಅತಿವೇಗದ ಬಸ್ ಡಿಕ್ಕಿ, ಸ್ಕೂಟಿ ಸವಾರ ಸ್ಥಳದಲ್ಲೇ ದುರ್ಮರಣ
ಭಟ್ಕಳದ ದರ್ಶನ ನಾಯ್ಕ ರಾಜ್ಯಕ್ಕೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಭಟ್ಕಳದ ಕೀರ್ತಿ
ಕಡಸಲಗದ್ದೆ ಗಾಂಧಿ ಫಾಲ್ಸ್ ಬಳಿ ಮೊಬೈಲ್ ಕಳವು ಯತ್ನ ಇಬ್ಬರು ಬಂಧನ