ಭಟ್ಕಳ: ಮುರುಡೇಶ್ವರ ಬೀಚ್ ಸಮೀಪ ಗಾಂಜಾ ಸೇವಿಸುತ್ತಿದ್ದ ತಮಿಳುನಾಡಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.
ಆರೋಪಿತ ಜೆ. ಹರಿಶಕುಮಾರ,ತಮಿಳುನಾಡು ನಿವಾಸಿ, ಮುರುಡೇಶ್ವರ ಬೀಚ್ ಎಡಬದಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದನೆಂಬ ಮಾಹಿತಿ ಆಧಾರದಲ್ಲಿ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದರು.
ನಂತರ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಆರೋಪಿತನು ಗಾಂಜಾ ಸೇವಿಸಿದ್ದಾನೆಂಬುದು ದೃಢಪಟ್ಟಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
About The Author


More Stories
ಭಟ್ಕಳದಲ್ಲಿ ಮನೆಯ ಶೆಡ್ನಿಂದ ಹೋಂಡಾ ಸ್ಕೂಟಿ ಕಳವು
ದೇಶಸೇವೆಯೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ: ಮುರ್ಡೇಶ್ವರ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಲಕ್ಷ್ಮಣ್ ಸವದಿ: ಪ್ರಗತಿಯತ್ತ ಹೊಸ ಹೆಜ್ಜೆ