ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ತಡರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ.
ಹೊನ್ನಾವರ , ಅಂಕೋಲಾ ಉಪನೋಂದಣಾಧಿಕಾರಿ ( ಸಬ್ ರಜಿಸ್ಟರ್) ಕಚೇರಿಗೆ ಗುರುವಾರ ಕಾರವಾರದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿ.ವಾಯ್.ಎಸ್.ಪಿ.ಧನ್ಯಾ ನಾಯಕ, ಇನ್‌ಸ್ಪೆಕ್ಟರ್ ರವಿ ಅವರನ್ನೊಳಗೊಂಡ ತಂಡ ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದ್ದು ರಾತ್ರಿಯವರೆಗೂ ಪರಿಶೀಲನೆ ಮುಂದುವರಿದಿದೆ.
ಹೊನ್ನಾವರ ಸಬ್ ರಜಿಸ್ಟರ್ ಕಚೇರಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಹರಿದಾಡುತ್ತಿದ್ದವು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾರೆಯೇ ಅಥವಾ ಸಾರ್ವಜನಿಕವಾಗಿ ಹರಿದಾಡುತ್ತಿರಯವ ದೂರಿನ ಹಿನ್ನಲೆಯಲ್ಲಿ ಆಗಮಿಸಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ