ಹೊನ್ನಾವರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಇಟ್ಟುಕೊಂಡಿದ್ದಾಗ ಪೊಲೀಸರು ದಾಳಿ ನಡೆಸಿ ಇರ್ವರು ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಸಂಭವಿಸಿದೆ. ಪಟ್ಟಣ ಪಾರೆಸ್ಟ ಕಾಲೋನಿ ನಿವಾಸಿ ಸೈಯದ್ ಗುಲ್ಜಾರ್ ಮುಕ್ತಾರ್, 208 ಗ್ರಾಂ ಗಾಂಜಾ ಹಾಗೂ ಅದನ್ನು ತೂಕ ಮಾಡುವ ಸಲಕರಣೆ ವಶಕೆ ಪಡೆದಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಆಮಿಲರ್ ಸೋಹೆಲ್ ಇಸ್ಮಾಯಿಲ್ ಮುಲ್ಲಾ ಗಾಂಧಿನಗರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಹೊನ್ನಾವರ ಪೊಲೀಸ್ ಠಾಣೆ ಪಿ ಐ ಸಿದ್ದರಾಮೇಶ್ವರ, ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಸಿಬ್ಬಂದಿಗಳಾದ ರಮಾನಂದ, ಪ್ರಶಾಂತ್ ನಾಯ್ಕ, ಶಿವಾನಂದ, ಗಜಾನನ ನಾಯ್ಕ ವಿನಾಯಕ ದುರ್ಗದ್, ವೆಂಕಟೇಶ್, ಚಂದ್ರಶೇಖರ ನಾಯ್ಕ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ


More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ