October 5, 2025

ಅತಿವೇಗದ ಬಸ್ ಡಿಕ್ಕಿ, ಸ್ಕೂಟಿ ಸವಾರ ಸ್ಥಳದಲ್ಲೇ ದುರ್ಮರಣ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಮುಟ್ಟಳ್ಳಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ.
ಮೂಲಗಳ ಪ್ರಕಾರ, ಕುಂದಾಪುರ ದಿಕ್ಕಿನಿಂದ ಭಟ್ಕಳ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ರಸ್ತೆ ಬದಿಯನಿಧಾನವಾಗಿ ಸಾಗುತ್ತಿದ್ದ ಹೋಂಡಾ ಡಿಯೋ ಸ್ಕೂಟಿಯನ್ನು ಓವರ್‌ಟೇಕ್ ಮಾಡಲು ಯತ್ನಿಸುವ ವೇಳೆ ಎಡಭಾಗದಿಂದ ಡಿಕ್ಕಿಹೊಡೆದಿದೆ. ಡಿಕ್ಕಿಯಿಂದ ಕೆಳಗೆ ಬಿದ್ದ ಸವಾರನ ತಲೆಯ ಮೇಲಿಂದ ಬಸ್ಸಿನ ಹಿಂಬದಿ ಚಕ್ರ ಹತ್ತಿಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಸುಂದರ (64) ಲಕ್ಷ್ಮಣ ಆಚಾರಿ, ಪುರವರ್ಗ ಗಣೇಶನಗರ ನಿವಾಸಿ ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಧರಿಸಿದ್ದರೂ ಅದು ನುಜ್ಜುಗುಜ್ಜಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಮೃತರ ಅಳಿಯ ಗುರುರಾಜ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ವಹಿಸಲಾಗಿದೆ. ಮೃತರು ಪತ್ನಿ, ಒಬ್ಬಳು ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸಿಪಿಐ ದಿವಾಕರ್ ಪಿ.ಎಂ, ಪಿಎಸ್‌ಐ ನವೀನ್ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

About The Author

error: Content is protected !!