ಭಟ್ಕಳ : ಗೋವಾದ ಮೊರ್ಜಿಮ ನಲ್ಲಿರುವ ಪ್ರತಿಷ್ಠಿತ ಅಕೇಶಿಯ ರೆಸಾರ್ಟನಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಗಣ್ಯಮಾನ್ಯ ವ್ಯಕ್ತಿಗಳನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಂಗಳೂರಿನ ಪ್ರತಿಷ್ಠಿತ ಎಕ್ಸ್ಪರ್ಟ ಕಾಲೇಜಿನ ಉಪನ್ಯಾಸಕರಾದ ಜಗದೀಶ ಗುರುನಾಥ ನಾಯ್ಕ ಅವರಿಗೆ “ರಾಷ್ಟ್ರೀಯ ಮಹಾತ್ಮಾ ಗಾಂಧಿ ಸದ್ಭಾವನಾ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಶಿಕ್ಷಣ, ಸಮಾಜ ಸೇವೆ, ಹಿಂದುಳಿದ ವರ್ಗಗಳ ಮತ್ತು ಸದ್ಭಾವನೆ ಬೇಳೆಸುವ ಕಾರ್ಯಗಳಲ್ಲಿ ನೀಡಿರುವ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸುವರ್ಣ ಚಾರಿಟಬಲ್ ಟ್ರಸ್ಟ್ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷರು ಎಂ ಶ್ರೀನಿವಾಸ ಬಾಬು.
ರಾಜ್ಯ ಉಪಾಧ್ಯಕ್ಷರು, ನೀಲಕಂಠ, ಡಾ.ಲಕ್ಷ್ಮೀ ಶ್ರೀನಿವಾಸ ಗುರೂಜಿ ಖ್ಯಾತ ಮುದ್ರಾ ಮತ್ತು ಮಂತ್ರ ತಜ್ಞರು. ಶ್ರೀ ತೋತಾಪುರಿ ಸೋಮಶೇಖರ ಗುರೂಜಿ,
ಗಣ್ಯರು, ಸಾಮಾಜಿಕ ಕಾರ್ಯಕರ್ತರು, ಸುವರ್ಣ ಸೂಪರ್ ಸ್ಟಾರ್ ಪವಿತ್ರ ನಾಯ್ಕ್ ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಸುವರ್ಣ ಚಾರಿಟಬಲ್ ಟ್ರಸ್ಟ್ ಪ್ರತಿನಿಧಿಗಳು ಸಮಾಜ ಅಭಿವೃದ್ಧಿಗೆ ತಮ್ಮ ಸಹಕಾರ ಮುಂದುವರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲರಿಂದಲೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳನ್ನು ಅನುಸರಿಸುವ ಪ್ರತಿಜ್ಞೆ ಕೈಗೊಳ್ಳಲಾಯಿತು. ಹಾಗೂ ಜಾನಪದ ನೃತ್ಯ, ಗಾಯನ, ವಿವಿಧ ರೀತಿಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಇನ್ನಷ್ಟು ಮೆರಗನ್ನು ನೀಡಿತು..

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ