November 19, 2025

ಕಳ್ಳತನ ತಡೆಗೆ ಹೆಬಳೆ ಗಾಂಧಿನಗರದಲ್ಲಿ ಸಿಸಿಟಿವಿ ಅಳವಡಿಕೆ

ಭಟ್ಕಳ: ಪಟ್ಟಣ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ, ಹಲ್ಲೆಯಂತಹ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಮುಂದಾಳುತ್ವದಲ್ಲಿ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಹೆಬಳೆ ಗಾಂಧಿನಗರದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಈ ವೇಳೆ ಮಾತನಾಡಿದ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರು, ಇತ್ತೀಚಿನ ದಿನಗಳಲ್ಲಿ ಮನೆ, ದೇವಸ್ಥಾನ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಆರೋಪಿಗಳನ್ನು ಪತ್ತೆಹಚ್ಚುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಯ್ದ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ಕೈಗೊಳ್ಳಲಾಗಿದೆ. ಜೊತೆಗೆ ಮನೆಮನೆ ಭೇಟಿ ಕಾರ್ಯಕ್ರಮವನ್ನೂ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಸಹಕರಿಸಿದರೆ ಅಪರಾಧ ನಿಯಂತ್ರಣ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

About The Author

error: Content is protected !!