
ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು ಭಟ್ಕಳ ನಗರ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ತಮ್ಮ ಮನೆಯ ಎದುರುಗಡೆ ನಿಲ್ಲಿಸಿದ್ದ ಬಜಾಜ್ ಚೇತಕ್ ಸ್ಕೂಟರ್ ಕಳ್ಳತನದ ಗುರಿಯಾದರೂ, ವಾಹನವನ್ನು ಕೊಂಡೊಯ್ಯಲು ಸಾಧ್ಯವಾಗದೇ, ಕಳ್ಳರು ನಂಬರ್ ಪ್ಲೇಟ್‌ನ್ನು ಮಾತ್ರ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.


ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ