
ಭಟ್ಕಳ: ಬಸ್ ಪ್ರಯಾಣದ ವೇಳೆ ಮಹಿಳೆಯೊಬ್ಬರ ಪರ್ಸ್ ಕಳವಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಜೊತೆಗೆ ನಗದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಭಟ್ಕಳ ಮೂಲದ ನಿವೃತ್ತ ಶಿಕ್ಷಕಿ ಆಸ್ಮಿನಾಭಾನು ಶೇಖ್ ಕಾಸೀಮ್ (61) ಇವರಿಗೆ ಈ ದುರ್ಘಟನೆ ಸಂಭವಿಸಿದೆ. ಭಟ್ಕಳ ಬಸ್ ನಿಲ್ದಾಣದಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದ ಅವರು, ತಲುಪಿದ ನಂತರ ತಮ್ಮ ಕೈಯಲ್ಲಿದ್ದ ಕೆಂಪು ಬಣ್ಣದ ಪರ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂತು.
ಅದರೊಳಗೆ ಸುಮಾರು 83 ಗ್ರಾಂ ಬಂಗಾರದ ಆಭರಣಗಳು (ಅಂದಾಜು ಮೌಲ್ಯ ರೂ.11.54 ಲಕ್ಷ) ಹಾಗೂ ?3,500 ನಗದು ಇದ್ದು, ಅಜ್ಞಾತ ಕಳ್ಳನು ಕಳವು ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬAಧ ಆಸ್ಮಿನಾಭಾನು ಅವರು ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ