
ಭಟ್ಕಳ : ಮುರುಡೇಶ್ವರದಲ್ಲಿ ೨೦೧೦ರಲ್ಲಿ ನಡೆದ ಯಮುನಾ ನಾಯ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕೋರ್ಟ್ ಆದೇಶದಂತೆ ತಕ್ಷಣ ಮರುತನಿಖೆ ಪೂರ್ಣಗೊಳಿಸಿ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಒತ್ತಾಯಿಸಿ, ಶ್ರೀರಾಮ ಸೇನೆಯವರು ಭಟ್ಕಳ ಡಿವೈಎಸ್ಪಿ ಮಹೇಶ್ ಕೆ. ಅವರಿಗೆ ಮನವಿ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ಉತ್ತರ ಪ್ರಾಂತ್ಯ ಉಪಾಧ್ಯಕ್ಷ ಜಯಂತ ನಾಯ್ಕ, “ಯಮುನಾ ನಾಯ್ಕ ಕೊಲೆ ಪ್ರಕರಣ ನಡೆದಿದ್ದು ೧೫ ವರ್ಷ ಕಳೆದರೂ ನ್ಯಾಯ ಸಿಗದ ಸ್ಥಿತಿ. ಈ ಪ್ರಕರಣದಲ್ಲಿ ಅಮಾಯಕ ವೆಂಕಟೇಶ ಹರಿಕಾಂತನನ್ನು ಸಿಲುಕಿಸಿ ಏಳು ವರ್ಷ ಜೈಲು ಜೀವನ ಅನುಭವಿಸಲು ಮಾಡಲಾಯಿತು. ನಂತರ ಜಿಲ್ಲಾ ನ್ಯಾಯಾಲಯವು ಅವರನ್ನು ಆರೋಪಮುಕ್ತಗೊಳಿಸಿ ಬಿಡುಗಡೆ ಮಾಡಿದ್ದು, ಮರುತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಡಿವೈಎಸ್ಪಿ ಮಹೇಶ್ ತನಿಖೆ ಅಂತಿಮ ಹಂತದಲ್ಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ ನಾವು ಇನ್ನೂ ಕಾಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ನ್ಯಾಯ ಒದಗಿಸದಿದ್ದರೆ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆ ಸಜ್ಜು ಮಾಡುತ್ತೇವೆ ಎಂದು ಎಚ್ಚರಿಸಿದರು.
ಅವರು ಮುಂದುವರೆದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯರು ವಿಶೇಷ ಆಸಕ್ತಿ ತೋರಬೇಕು. ಯಮುನಾ ನಾಯ್ಕ ಕುಟುಂಬ ಬಡತನದಲ್ಲಿದ್ದು, ಕೆಲವರು ಅವರ ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ವೆಂಕಟೇಶ ಹರಿಕಾಂತ ಅವರನ್ನು ಕೋರ್ಟ್ ಬಿಡುಗಡೆ ಮಾಡಿದರೂ ಕೆಲವರು ಇನ್ನೂ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸಮಾಜದ ಮುಖಂಡರು ಕೂಡಾ ನಿರ್ಲಕ್ಷ್ಯ ವಹಿಸದೆ, ಪೊಲೀಸರು ಮರುತನಿಖೆಗೆ ಚುರುಕು ತರುವಂತೆ ಒತ್ತಡ ಹೇಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಪ್ರಮುಖರಾದ ರಾಘು ನಾಯ್ಕ, ಮಂಜುನಾಥ ನಾಯ್ಕ, ರಾಮ ನಾಯ್ಕ, ನಾಗರಾಜ ನಾಯ್ಕ, ಸಂತೋಷ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು

More Stories
ಬ್ಯಾಂಕ್ ಎಟಿಎಂ ಭದ್ರತೆ: ಮುರುಡೇಶ್ವರ ಠಾಣೆಯಲ್ಲಿ ಮುನ್ನೆಚ್ಚರಿಕಾ ಸಭೆ
ಮುರುಡೇಶ್ವರ ಸಮುದ್ರದಲ್ಲಿ ಅಲೆಗಳಿಗೆ ಸಿಲುಕಿ ಪ್ರವಾಸಿಗ ಸಾವು
ತಾಲೂಕಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀನಾ ವೈದ್ಯ ಕಾಲೇಜು ವಿದ್ಯಾರ್ಥಿಗಳ ಸಾಧನೆ.