ಹೊನ್ನಾವರ: ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶಿವರಾಮ ಕೃಷ್ಣ ಸಂಗುಮನೆ ಉಪಾಧ್ಯಕ್ಷರಾಗಿ ಹರೀಶ ತಿಮ್ಮಪ್ಪ ಗೌಡ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಅಧಿಕಾರ ಸ್ವೀಕರಿಸಿದ ಶಿವರಾಮ ಕೃಷ್ಣ ಸಂಗುಮನೆ ಮಾತನಾಡಿ ಕೃಷಿಕ, ಗ್ರಾಹಕರ ಹಿತಕಾಯುವುದರ ಜೊತೆ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ರಾಜ್ಯದಲ್ಲೇ ಮಾದರಿ ಬ್ಯಾಂಕ ಆಗಿಸಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಚಿವ ಮಂಕಾಳ ವೈದ್ಯ, ನಿರ್ದೆಶಕರುಗಳು, ಸಿಬ್ಬಂದಿಗಳು ಅಭಿನಂದಿಸಿದರು.




ಚುನಾವಣಾ ಅಧಿಕಾರಿ ಸುಮನಾ ಎಮ್ ನಾಯ್ಕ ಚುನಾವಣಾ ಪ್ರಕ್ರಿಯೆ ನಡೆಸಿದರು.ಆಡಳಿತ ಮಂಡಳಿಯ ಎಲ್ಲ ನಿರ್ದೇಶಕ ರು, ಪ್ರಧಾನ ವ್ಯವಸ್ಥಾಪಕ ಎಂ.ಡಿ.ಮುಕ್ರಿ ಉಪಸ್ಥಿತರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಶಿಕ್ಷಣ ಇಲಾಖೆ ತಂಡ ಚಾಂಪಿಯನ್
ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ
ಕೆರೆಕೋಣದಲ್ಲಿ “ಪೂರ್ಣಚಂದ್ರ ತೇಜಸ್ವಿ – ಒಂದು ಮೆಲುಕು”