November 19, 2025

ಭಟ್ಕಳದ ಹಿರಿಯ ಪತ್ರಕರ್ತ ಇನಾಯತುಲ್ಲಾ ಗವಾಯಿಯವರಿಗೆ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ

ಭಟ್ಕಳ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೀರ್ಘಕಾಲದಿಂದ ನಿಷ್ಠೆ, ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಭಟ್ಕಳದ ಹಿರಿಯ ಪತ್ರಕರ್ತ ಹಾಗೂ ಸಾಹಿಲ್ ಆನ್‌ಲೈನ್ ಸಂಪಾದಕರಾದ ಇನಾಯತುಲ್ಲಾ ಗವಾಯಿ ಅವರಿಗೆ ಈ ವರ್ಷದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.

ಪತ್ರಿಕೋದ್ಯಮವನ್ನು ಕೇವಲ ವೃತ್ತಿಯನ್ನಾಗಿ ಅಲ್ಲದೆ, ಜನಸೇವೆಯ ವೇದಿಕೆಯಾಗಿ ಪರಿಗಣಿಸಿ ಸಾಮಾಜಿಕ ಬದ್ಧತೆಯ ವರದಿಗಳ ಮೂಲಕ ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತಂದು ಪರಿಹಾರದ ದಾರಿಗೆ ಮುನ್ನಡೆಸಿದ ಗವಾಯಿ ಅವರ ಕಾರ್ಯ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ನಾಳೆ(1-11-2025) ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯೋತ್ಸವ ಸಮಾರಂಭದಲ್ಲಿ ತಾಲ್ಲೂಕು ಆಡಳಿತದಿಂದ ಗವಾಯಿ ಅವರಿಗೆ ಸನ್ಮಾನ ಮಾಡಲಾಗುತ್ತದೆ. ಗವಾಯಿ ಅವರ ಈ ಸಾಧನೆಗೆ ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ಮತ್ತು ಸದಸ್ಯರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಟ್ಟ್, ಮಾಜಿ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ ಹಾಗೂ ಭಟ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಆರ್. ಮಾನ್ವಿ, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು, ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಸಾಹಿಲ್ ಆನ್‌ಲೈನ್ ಸಂಪಾದಕೀಯ ತಂಡವು ಸಹ ತಮ್ಮ ಸಂಪಾದಕರಾದ ಗವಾಯಿ ಅವರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದೆ.

About The Author

error: Content is protected !!