ಭಟ್ಕಳ: ನಗರದ ಸಂತೆ ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ವ್ಯಕ್ತಿಯನ್ನು ಭಟ್ಕಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಹನೀಫಾಬಾದ್ ನಿವಾಸಿ ಸೈಯ್ಯದ ಮೂಸಾ (ತಂದೆ ಸೈಯ್ಯದ ಅಹ್ಮದ) ಎಂದು ಗುರುತಿಸಲಾಗಿದೆ. ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಈತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಗಾಂಜಾ ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ನAತರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬAಧ ಸರ್ಕಾರದ ಪರವಾಗಿ ಪಿಎಸ್‌ಐ ತಿಮ್ಮಪ್ಪ ಎಸ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ