ಭಟ್ಕಳ: ಸ್ಥಳೀಯ ಲೈಫ್ ಕೇರ್ ಆಸ್ಪತ್ರೆಗೆ ಕಳಂಕ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪುಪ್ರಚಾರ ನಡೆಸಿ, ಕರ್ತವ್ಯದಲ್ಲಿದ್ದ ವೈದ್ಯರಿಗೆ ಜೀವ ಬೆದರಿಕೆ ಹಾಕಿದ ಘಟನೆ ಹೊರಬಿದ್ದಿದೆ.


ಮೂರು ವರ್ಷದ ಬಾಲಕ ಬಿಸಿ ನೀರಿನಿಂದ ಗಂಭೀರವಾಗಿ ಸುಟ್ಟ ಪರಿಣಾಮ ಗಾಯಗೊಂಡಿದ್ದನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಕಾಲ ಆಸ್ಪತ್ರೆಯ ವೈದ್ಯರು ಹಾಗೂ ಹೊರಗಿನಿಂದ ಕರೆಯಿಸಿಕೊಂಡ ತಜ್ಞರು ಚಿಕಿತ್ಸೆ ನೀಡುತ್ತಿದ್ದರು. ಈ ನಡುವೆ ಬಾಲಕನ ಪಾಲಕರು “ಚಿಕಿತ್ಸೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ವೈದ್ಯರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ದೂರುನಿವೇದನೆ.
ಆರೋಪಿತನು ಭಟ್ಕಳ ಕ್ರಿಕೆಟ್ ಗ್ರೂಪ್ ಸೇರಿದಂತೆ ಹಲವಾರು ವಾಟ್ಸಾಪ್ ಗುಂಪುಗಳಲ್ಲಿ ಸುಳ್ಳು ವಿಡಿಯೋ ಹಾಗೂ ಸಂದೇಶಗಳನ್ನು ಹಂಚಿಕೊAಡಿದ್ದು, ಆಸ್ಪತ್ರೆಯ ಗೌರವ ಹಾಳು ಮಾಡುವ ಉದ್ದೇಶ ಸ್ಪಷ್ಟವಾಗಿದೆ ಎಂದು ಆಡಳಿತಾಧಿಕಾರಿ ಸಲ್ಮಾನ್ ಅಹ್ಮದ್ ನಗರ ಠಾಣೆಗೆ ದೂರು ನೀಡಿದ್ದಾರೆ. ಮೊದಲು ಎನ್.ಸಿ. ಪ್ರಕರಣ ದಾಖಲಿಸಲ್ಪಟ್ಟಿದ್ದು, ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಪೂರ್ಣ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ಸಲ್ಮಾನ್ ಅಹ್ಮದ್ ಅವರು, ಬಾಲಕನ ತೀವ್ರ ಸುಟ್ಟ ಗಾಯ ಪಾಲಕರ ನಿರ್ಲಕ್ಷ್ಯದಿಂದ ಸಂಭವಿಸಿದೆ. ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸಲಹೆ ನಿರ್ಲಕ್ಷಿಸಿ ಮಂಗಳೂರಿಗೆ ಕರೆದೊಯ್ದು ಅಲ್ಲಿಯೂ ಚಿಕಿತ್ಸೆ ಕೊಡಿಸದೆ ಮನೆಗೆ ಕರೆದುಕೊಂಡು ಬಂದಿದ್ದಾರೆ. ನಮ್ಮ ಆಸ್ಪತ್ರೆಯ ವಿರುದ್ಧ ಸಂಚು ರೂಪಿಸಲಾಗಿದೆ. ಇದರ ಹಿಂದೆ ಇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಮಾನನಷ್ಟ ಮೊಕದ್ದಮೆ ಹೂಡುವ ವಿಚಾರದಲ್ಲೂ ಕಾನೂನು ಸಲಹೆ ಪಡೆಯುತ್ತಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಮೊಹಮ್ಮದ್ ನವಾಬ್ ಹಾಗೂ ವ್ಯವಸ್ಥಾಪಕರು ಉಪಸ್ಥಿತರಿದ್ದರು.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ