ಭಟ್ಕಳ: ಪಾಸ್ ಅಥವಾ ಪರ್ಮಿಟ್ ಇಲ್ಲದೇ ಮರಳು ಸಾಗಾಟ ನಡೆಸುತ್ತಿದ್ದ ಚಾಲಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಕಾಜಿಮನೆ ನಿವಾಸಿ ನಾಗರಾಜ ಮಂಜುನಾಥ ನಾಯ್ಕ, ಎಂಬಾತನು ಸರ್ಕಾರದ ಅನುಮತಿ ಪಡೆಯದೇ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾನೆಂಬ ಮಾಹಿತಿ ಮೇರೆಗೆ ಪೊಲೀಸರು ಶಿರಾಲಿ ಜಂಕ್ಷನ್ ಹತ್ತಿರ ವಾಹನ ತಡೆದು ತಪಾಸಣೆ ನಡೆಸಿದರು.

ಈ ವೇಳೆ ಸುಮಾರು ರೂ.10,000 ಮೌಲ್ಯದ 2.5 ಯುನಿಟ್ ಮರಳನ್ನು ಒಳಗೊಂಡ ಟಿಪ್ಪರ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಅಕ್ರಮ ಮರಳು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಹಿನ್ನೆಲೆಯಲ್ಲಿ ಪಿಎಸೈ ಭರಮಪ್ಪ ಬೆಳಗಲಿ ಅವರ ದೂರು ಮೇರೆಗೆ ಆರೋಪಿತ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ