

ಭಟ್ಕಳ: ಡಾ. ಮಹಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಭಟ್ಕಳದ ಶ್ರೀಗುರು ವಿದ್ಯಾದಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ವ್ಯಾಸನಮುಕ್ತ ದಿನಾಚರಣೆ ನಡೆಯಿತು.
ಕಾರ್ಯಕ್ರಮವನ್ನು ತಾಲೂಕಾ ಕಂದಾಯ ಇಲಾಖೆ ಮತ್ತು ಆಡಳಿತ ಭಟ್ಕಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟನೆ ಮಾಡಿದ ಪ್ರಾಂಶುಪಾಲ ವಿರೇಂದ್ರ ಶಾನಭಾಗ ಮಾತನಾಡುತ್ತಾ, ಡಾ. ಮಹಂತ ಶಿವಯೋಗಿ ಸ್ವಾಮೀಜಿಯವರು ಹತ್ತು ವರ್ಷದ ಬಾಲ್ಯದಲ್ಲಿಯೇ ಯೋಗಿಯಾಗುವ ಗುರಿ ಇಟ್ಟುಕೊಂಡಿದ್ದರು. ವ್ಯಸನಮುಕ್ತ ಸಮಾಜ ಅವರ ಕನಸು. ಇಂದು ಮೊಬೈಲ್ ಕೂಡ ವ್ಯಸನವಾಗಿ ಪರಿಣಮಿಸಿದ್ದು, ಯುವಜನತೆ ಎಚ್ಚೆತ್ತುಕೊಳ್ಳಬೇಕು ಎಂದರು.
ಶಿಕ್ಷಕ ಚಿದಾನಂದ ಪಟಗಾರ ಉಪನ್ಯಾಸ ನೀಡಿದ ಅವರು, “ಇತ್ತೀಚಿನ ದಿನಗಳಲ್ಲಿ ಯುವತಿಯರೂ ಸಹ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಇಂದಿನಿAದಲೇ ವ್ಯಸನ ಮುಕ್ತ ಬದುಕಿಗೆ ಬದ್ಧರಾಗಬೇಕು. ಮಹಂತ ಸ್ವಾಮೀಜಿಯವರ ಆದರ್ಶ ಅನುಕರಣೀಯ ಎಂದು ಹೇಳಿದರು.
ತಹಶಿಲ್ದಾರ ನಾಗೇಂದ್ರ ಕೋಳಶೆಟ್ಟಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಸಮಾಜಕ್ಕಾಗಿ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮಕ್ಕೂ ಮೊದಲು ಭಟ್ಕಳ ಆಡಳಿತ ಸೌಧದಿಂದ ಪಿಯು ಕಾಲೇಜು ತನಕ ವಿದ್ಯಾರ್ಥಿಗಳು ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುಶೀಲಾ ಮೊಗೇರ, ತಾಪಂ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ ನಾಯ್ಕ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಘವೇಂದ್ರ, ಪ್ರಕಾಶ ಶಿರಾಲಿ ಸೇರಿದಂತೆ ಹಲವರು ಹಾಜರಿದ್ದರು.
More Stories
‘ಅಯ್ಯಪ್ಪಸ್ವಾಮಿ ರೂಪದ ಗಣಪ’ ಹಾಗೂ ‘ಆಪರೇಷನ್ ಸಿಂಧೂರ್ ಥೀಮ್’
ಮುಟ್ಟಳಿ ಮೂಡಭಟ್ಕಳ ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿಯಿಂದ ವೆಂಕಟರಮಣ ನಾಯ್ಕರಿಗೆ ಸನ್ಮಾನ
ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿದ ಕಾಂಗ್ರೇಸ್ ಮುಖಂಡರಾದ ಮಂಜುನಾಥ ನಾಯ್ಕ