ಹೊನ್ನಾವರ : ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರ ಉತ್ತರಕನ್ನಡ, ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು ವೇದಿಕೆಯ ಮೇಲೆ ಇರಬಹುದು ಎನ್ನುವ ನಿಯಮವಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರೊರ್ವರು ವೇದಿಕೆಯ ಮೇಲೆ ಎದುರು ಸಾಲಿನಲ್ಲಿ ಕುಳಿತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತೆ ಕಾವ್ಯರಾಣಿ, ತಹಶೀಲ್ದಾರ ಪ್ರವೀಣ ಕರಾಂಡೆ, ಜನಪ್ರತಿನಿಧಿಗಳಾದ

ಸಂಸದರು, ಶಾಸಕರು ಪ.ಪಂ.ಸದಸ್ಯರು, ಗ್ರಾ.ಪಂ.ಸದಸ್ಯರು ಇದ್ದರು. ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ವೇದಿಕೆಯ ಮೇಲೆ ಇರುವುದು ಕಾನೂನು ಪ್ರಕಾರ ನಿಯಮ ಉಲ್ಲಂಘನೆಯಾಗಿದ್ದು, ಸಾರ್ವಜನಿಕ ವಲಯದಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಶಿಕ್ಷಣ ಇಲಾಖೆ ತಂಡ ಚಾಂಪಿಯನ್
ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ
ಕೆರೆಕೋಣದಲ್ಲಿ “ಪೂರ್ಣಚಂದ್ರ ತೇಜಸ್ವಿ – ಒಂದು ಮೆಲುಕು”