ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮದ ತೆಕ್ಕಿನಗದ್ದೆ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿತರನ್ನು ಬಂಧಿಸಿದ್ದಾರೆ.

ದಾಳಿಯ ವೇಳೆ ರೂ 5.05 ಲಕ್ಷ ಮೌಲ್ಯದ ಸ್ವತ್ತುಗಳೊಂದಿಗೆ ಸೇರಿದಂತೆ ಜೂಜಾಟಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಏಳು ಮಂದಿ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಬಂಧಿತರಾದವರನ್ನು ಹೊನ್ನಾವರ ಮೂಲದ ಅಕ್ಷಯ (ತಂದೆ ರಮೇಶ್ ಮಡಿವಾಳ), ಸುಬ್ರಾಯ (ತಂದೆ ಕೃಷ್ಣ ಗೌಡ) ಹಾಗೂ ಅಜಿತ (ತಂದೆ ಜಟ್ಟಿ ಗೌಡ) ಎಂದು ಗುರುತಿಸಲಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಅಂಗಾರೆಡ್ಡಿ ಅವರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.
About The Author


More Stories
ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ್ ಕಚೇರಿಗೆ ಮನವಿ
ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬಿಸಿ ಮುಟ್ಟಿಸಿದ ಎಎಸ್ಪಿ ರಾನು ಗುಪ್ತ: 6 ಟಿಪ್ಪರ್ಗಳು, 6 ಮಂದಿ ವಶಕ್ಕೆ
ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯರಿಗೆ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಸನ್ಮಾನ