ಭಾವನಾ ಸುದ್ದಿ ಬೈಂದೂರು : ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ (SಉಈI) ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆದಿಚುಂಚನಗಿರಿಯಲ್ಲಿ ಇತ್ತೀಚೆಗೆ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

More Stories
ಮಹತೋಭಾರ ಸೇನೇಶ್ವರ ದೇವಸ್ಥಾನ ಉತ್ಸವ ಮೂರ್ತಿ ವನಭೋಜನ
ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಹರ್ಷರಿಗೆ ಶಾಲೆಯಲ್ಲಿ ಭವ್ಯ ಸ್ವಾಗತ
ವತ್ತಿನಕಟ್ಟೆ ಮಹಾಸತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ