November 19, 2025

ಅಶೋಕ ಪೈ ಅವರಿಗೆ ಸಹಕಾರ ರತ್ನ ಪ್ರಶಸ್ತಿ 2025

ಭಟ್ಕಳ: ಸಹಕಾರ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ನಿಸ್ವಾರ್ಥ ಹಾಗೂ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಮಾರುತಿ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಶ್ರೀ ಅಶೋಕ ಪೈ ಅವರಿಗೆ, ಕರ್ನಾಟಕ ಸರ್ಕಾರವು ನೀಡುವ ಸಹಕಾರ ರತ್ನ ಪ್ರಶಸ್ತಿ 2025 ಲಭಿಸಿದೆ.

ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಯನ್ನು ಹಸ್ತಾಂತರಿಸಲಿದ್ದಾರೆ.

ಅಶೋಕ ಪೈ ಅವರು 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023ರಲ್ಲಿ ಉತ್ತಮ ಸಹಕಾರಿ ಸಂಘದ ಅಧ್ಯಕ್ಷ ಪ್ರಶಸ್ತಿಯನ್ನು ಸಹ ಗಳಿಸಿದ್ದರು. ಅವರ ಸತತ 25 ವರ್ಷಗಳ ಅಧ್ಯಕ್ಷೀಯ ಅವಧಿಯಲ್ಲಿ, ಮಾರುತಿ ಪತ್ತಿನ ಸಂಘವು ಹಲವು ಬಾರಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಅವರ ಶ್ರೇಷ್ಠ ಆಡಳಿತವನ್ನು ಸಾಬೀತುಪಡಿಸಿದೆ.

ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಶೋಕ ಪೈ ಅವರಿಗೆ, ಪ್ರಿಯದರ್ಶಿನಿ ಇಂದಿರಾಗಾAಧಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಲಭಿಸಿವೆ.

About The Author

error: Content is protected !!