December 24, 2025

ರೂ 2,710 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಿಡುಗಡೆ

ಹೊನ್ನಾವರ : ಸರ್ಕಾರವು ಉತ್ತರ ಕನ್ನಡ ಜಿಲ್ಲೆಗೆ ಒಟ್ಟು ರೂ 2,710 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸತೀಶ ಪಿ.ನಾಯ್ಕ ಮಾಹಿತಿ ನೀಡಿದರು.

ಹೊನ್ನಾವರ ತಾಲ್ಲೂಕ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವ ನಿಧಿ ಜಾರಿಯ ಕುರಿತಾದ ವಿಭಾಗವಾರು ಪ್ರಗತಿ ವರದಿಗಳನ್ನು ಪರಿಶೀಲಿಸಲಾಯಿತು. ಫಲಾನುಭವಿಗಳಿಗೆ ಸೇವೆಗಳು ನಿಖರವಾಗಿ ತಲುಪುವಲ್ಲಿ ಕೆಲವು ತಾಲೂಕುಗಳಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆ ಚರ್ಚಿಸಿ, ತಕ್ಷಣ ಪರಿಹಾರ ನೀಡುವಂತೆ ಸಂಬAಧಿತ ಇಲಾಖೆಗೆ ಸೂಚನೆ ನೀಡಲಾಯಿತು.

ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸುವುದು ಮತ್ತು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪುವಂತೆ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆ ಮುಂದುವರಿಸುವುದಾಗಿ ಸಭೆಯಲ್ಲಿ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ್, ಜನಾರ್ಧನ್ ದೇವಾಡಿಗ, ತಾಲೂಕ ಅಧ್ಯಕ್ಷರುಗಳಾದ ಅಣ್ಣಪ್ಪ ನಾಯಕ, ಅಶೋಕ್ ಗೌಡ, ರಾಜೇಂದ್ರ ರಾಣೇ, ಉಲ್ಲಾಸ್ ಶಾನಭಾಗ, ಪಾಂಡುರAಗ ಗೌಡ,ರಾಜಶೇಖರ್ ಹಿರೇಮಠ್,ಕೆ ಜಿ ನಾಯ್ಕ, ಸುಮ ಉಗ್ರಂಣ್ಣಕರ ಹಾಗೂ ಜಿಲ್ಲಾ ಮತ್ತು ತಾಲೂಕ ಪಂಚಾಯತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!