December 23, 2025

ಶಿಕ್ಷಕರ ತರಬೇತಿ ಕಾರ್ಯಾಗಾರ “ವಿಸ್ತಾರ”

ಭಟ್ಕಳ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಪೌಂಡೇಶನ್, ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಯೋಧ್ಯಾ ನಗರದಲ್ಲಿರುವ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ನಡೆದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಾಗಾರ “ವಿಸ್ತಾರ” ಯಶಸ್ವೀಯಾಗಿ ಸಂಪನ್ನಗೊAಡಿತು.

ವಿದ್ಯಾಂಜಲಿ ಪಬ್ಲಿಕ್ ಶಾಲೆ ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಮೂರು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಾಗಾರವು ಮೂಡಬಿದರೆಯ ಸವಿ ಫೌಂಡೇಶನ್‌ನ ಸಂಸ್ಥಾಪಕ ಡಾ. ಸಂದೀಪ ನಾಯಕ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಗಾರದ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭವು ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುರೇಶ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿರುವ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಸವಿ ಪೌಂಡೇಶನ್‌ನ ಸಂಸ್ಥಾಪಕ ಡಾ. ಸಂದೀಪ ನಾಯಕ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ ಮಾತನಾಡಿ ಮಕ್ಕಳಿಗೆ ಪಠ್ಯ ಶಿಕ್ಷಣ ಜೊತೆಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯ ಅರಿವು ಮುಡಿಸುವುದು ಕೂಡಾ ಅತೀ ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅನಂತಮೂರ್ತಿ ಶಾಸ್ತ್ರಿ ಹಾಗೂ ಶ್ರೀನಾಥ ಪೈ ಇವರು ಶಿಕ್ಷಕರಿಗೆ ಆಧುನಿಕ ಶೈಕ್ಷಣಿಕ ಕೌಶಲ್ಯದ ಕುರಿತು ಉಪನ್ಯಾಸ ನೀಡಿದರು. ಭಟ್ಕಳ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಘವೇಂದ್ರ ಕಾಮತ ಸ್ವಾಗತಿಸಿದರು. ವಿದ್ಯಾಭಾರತಿ ಶಾಲೆಯ ಶಿಕ್ಷಕಿ ಸೀಮಾ ನಾಯಕ ಹಾಗೂ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಶಿಕ್ಷಕಿ ಪ್ರೀತಿ ಪ್ರಭು ಕಾರ್ಯಾಗಾರದ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಬೀಬಿಯಾನ ಗೋಮ್ಸ್ ಹಾಗೂ ಆನ್‌ರೋಸ್ ಕಾರ್ಯಕ್ರಮ ನೀರೂಪಿಸಿದರು.

About The Author

error: Content is protected !!