ಭಟ್ಕಳ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಪೌಂಡೇಶನ್ , ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ , ವಿದ್ಯಾಂಜಲಿ ಪಬ್ಲಿಕ್ ಶಾಲೆ ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ 3 ದಿನಗಳ ಶಿಕ್ಷಕರ ತರಬೇತಿ ಕಾರ್ಯಾಗಾರ “ವಿಸ್ತಾರ” ಯಶಸ್ವಿಯಾಗಿ ಸಂಪನ್ನಗೊAಡಿತು. ಕಾರ್ಯಕ್ರಮದ ರೂವಾರಿ ಸವಿ ಪೌಂಡೇಶನ್ ನ ಸಂಸ್ಥಾಪಕ ಡಾ. ಸಂದೀಪ ನಾಯಕ ಮಾತನಾಡಿ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಪತ್ರಕರ್ತ ಶ್ರೀಯುತ ರಾಧಾಕೃಷ್ಣ ಭಟ್ ಇವರು ಮಾತನಾಡಿ ಮಕ್ಕಳಿಗೆ ಪಠ್ಯ ಶಿಕ್ಷಣ ಜೊತೆಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸಬೇಕೆಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅನಂತಮೂರ್ತಿ ಶಾಸ್ತ್ರಿ ಹಾಗೂ ಶ್ರೀ ಶ್ರೀನಾಥ ಪೈ ಇವರು ಶಿಕ್ಷಕರಿಗೆ ಆಧುನಿಕ ಶೈಕ್ಷಣಿಕ ಕೌಶಲ್ಯದ ಕುರಿತು ಉಪನ್ಯಾಸ ನೀಡಿದರು. ಭಟ್ಕಳ ಎಜುಕೇಶನ್ ಟ್ರಸ್ಟನ ಅಧ್ಯಕ್ಷರಾದ ಡಾ. ಸುರೇಶ್ ನಾಯಕರವರು ಮಾತನಾಡಿ ಈ ಭಾಗದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿರುವ ಎಲ್ಲಾ ಶಿಕ್ಷಕರಿಗೆ ಅಭಿನಂದಿಸಿದರು ಹಾಗೂ ತರಬೇತಿ ಪಡೆದ ಎಲ್ಲಾ ಶಿಕ್ಷಕರಿಗೆ ಪ್ರಮಾಣಪತ್ರ ವಿತರಿಸಿದರು. ವಿದ್ಯಾಂಜಲಿ ಶಾಲೆಯ ಪ್ರಾಂಶುಪಾಲರಾದ ರಾಘವೇಂದ್ರ ಕಾಮತ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಶಿಕ್ಷಕಿಯರಾದ ಬೀಬಿಯಾನ ಗೋಮ್ಸ್ ಹಾಗೂ ಆನ್ ರೋಸ್ ಕಾರ್ಯಕ್ರಮ ನೀರೂಪಿಸಿದರು.

More Stories
ಭಟ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೋಹನ ನಾಯ್ಕ ಅವಿರೋಧವಾಗಿ ಆಯ್ಕೆ
ಶ್ರೀವಲಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ