ಭಟ್ಕಳ :ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಧರ್ಮವನ್ನು ಪೋಷಿಸುವ, ಸಂಶೋಧನಾ ಆಧಾರಿತ ಕಲಿಕೆಯನ್ನು ಉತ್ತೇಜಿಸುವ, ಮತ್ತು ವಿಶ್ಲೇಷಣಾತ್ಮಕ ಚಿಂತನೆಯನ್ನು ಬೆಳೆಸುವ ವಿಜ್ಞಾನ ಮೇಳ ಭಟ್ಕಳ ತಾಲೂಕಿನ ಶಮ್ಸ್ ಪಿ.ಯು. ಕಾಲೇಜಿನ ಡಾ. ಎಂ.ಟಿ. ಹಸನ್‌ಬಾಪಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಅಂಜುಮಾನ್ ಹಾಮಿ-ಎ-ಮುಸ್ಲಿಮೀನ್‌ನ ಉಪಾಧ್ಯಕ್ಷ ಡಾ. ಮೊಹಮ್ಮದ್ ಜುಬೈರ್ ಕೋಲಾ ಮಾತನಾಡಿ ಶಿಕ್ಷಣದ ಮಹತ್ವ ಮತ್ತು ಶಾಲಾ ಮಟ್ಟದಲ್ಲಿಯೇ ಸಂಶೋಧನಾ ದೃಷ್ಟಿಕೋನವನ್ನು ಬೆಳೆಸುವ ಅಗತ್ಯತೆಯನ್ನು ತಿಳಿಸಿದರು.
ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಚೇರ್ಮನ್ ನಝೀರ್ ಆಹ್ಮದ್ ಖಾಝಿ ಅಧ್ಯಕ್ಷತೆ ವಹಿಸಿದ್ದರು.
ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ವೀರೇಂದ್ರ ವಿ. ಶಾನಭಾಗ್ ಅವರು ಕೌಶಲ್ಯ ಆಧಾರಿತ ಕಲಿಕೆಯ ಮಹತ್ವವನ್ನು ತಿಳಿಸುತ್ತಾ ನೈಜ ಜಗತ್ತಿನ ನವೋದ್ಯಮ ಯಶಸ್ಸಿನ ಕಥೆಗಳನ್ನು ಹಂಚಿಕೊAಡರು.
ಎಜೆ ಅಕಾಡೆಮಿ ಆಫ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್‌ನ ನಿರ್ದೇಶಕ ಅಬ್ದುಲ್ಲಾ ಜಾವೇದ್ ಮಾತನಾಡಿ ಸಂಶೋಧನೆಯಲ್ಲಿ ಸ್ವಂತಿಕೆ, ವಿಧಾನ ಮತ್ತು ವೈಜ್ಞಾನಿಕ ಕಠಿಣತೆಯ ಅಗತ್ಯ ತಿಳಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಉಪಾಧ್ಯಕ್ಷ ಸೈಯದ್ ಖುತುಬ್ ಬರ್ಮಾವರ್ ನದ್ವಿ, ಮೌಲಾನ ಅಝೀಝುರ್ರಹ್ಮಾನ್ ನದ್ವಿ, ಸೈಯ್ಯದ್ ಶಕೀಲ್ ಎಸ್.ಎಂ, ಮತ್ತಿತರರು ಇದ್ದರು.
ಅಹ್ಮದ್ ಜಯಾನ್ ಕಿರಾತ್ ಪಠಣ ಮಾಡಿದರು. ಪ್ರಾಂಶುಪಾಲ ಲಿಯಾಖತ್ ಅಲಿ ಸ್ವಾಗತಿಸಿದರು. ಶಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಮುಹಮ್ಮದ್ ರಜಾ ಮಾನ್ವಿ ನಿರ್ಣಾಯಕರನ್ನು ಪರಿಯಿಸಿದರು. ಸೈನ್ ಫೇರ್‌ನ ಸಂಚಲಕಿ ಡಾ. ಮಮತಾ ನಾಯ್ಕ ವಂದಿಸಿದರು. ವಿಜ್ಞಾನ ಮೇಳದಲ್ಲಿ ಒಟ್ಟು 10 ಸಂಸ್ಥೆಗಳ 52 ತಂಡಗಳು ತಮ್ಮ ಸಂಶೋಧನಾ ಯೋಜನೆಗಳನ್ನು ಪ್ರದರ್ಶಿಸಿದವು.

More Stories
ಭಟ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೋಹನ ನಾಯ್ಕ ಅವಿರೋಧವಾಗಿ ಆಯ್ಕೆ
ಶ್ರೀವಲಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ