ಭಟ್ಕಳ: ಪಟ್ಟಣದ ಜಾಲಿ ದೇವಿನಗರದಲ್ಲಿರುವ ಮನೆ ಒಂದರಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

ದೂರಿನ ಪ್ರಕಾರ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮೊದಲು ಮನೆಯ ಮುಂಭಾಗದ ಬೀಗವನ್ನು ಮುರಿದು ಒಳ ಪ್ರವೇಶಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಕಬ್ಬಿಣ ಮತ್ತು ಮರದ ಕಪಾಟುಗಳನ್ನು ತೆರೆಯಲಾಗಿದ್ದು, ಅವುಗಳಲ್ಲಿ ಇರಿಸಿದ್ದ 86 ಗ್ರಾಂ ಬಂಗಾರದ ಆಭರಣಗಳು (ಅ.ಮು. ರೂ. 8,60,000), 14 ಗ್ರಾಂ ಬೆಳ್ಳಿಯ ಆಭರಣಗಳು (ಅ.ಮು. ರೂ. 12,480) ಹಾಗೂ ರೂ. 10,000 ನಗದು ಕಳವು ಮಾಡಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ. ಮನೆಯ ಮಾಲಕಿ ಪದ್ಮಾ ಮಾಧವ ನಾಯ್ಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ