December 23, 2025

ಜಿಲ್ಲಾ ಪದಾಧಿಕಾರಿಗಳಿಗೆ ಸನ್ಮಾನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್.ಎಂ. ಮಾರುತಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ಆಯ್ಕೆಯಾದ ಸತೀಶ ತಾಂಡೇಲ್ ಅವರಿಗೆ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಜಿಲ್ಲಾ ಸಂಘದ ಉಪಾಧ್ಯಕ್ಷ ಎಚ್.ಎಂ. ಮಾರುತಿ ಮಾತನಾಡಿ, ಪ್ರಜಾಪ್ರಭುತ್ವ ನಾಲ್ಕನೇ ಅಂಗದAತೆ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿರುವ ನಾವೆಲ್ಲರೂ ಸಾರ್ವಜನಿಕರ ಸಮಸ್ಯೆಗೆ ಧ್ವನಿಯಾಗೋಣ. ಅವರ ಸಂಕಷ್ಠವನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಬಗಹರಿಸುವತ್ತ ಪ್ರಾಮಾಣಿಕವಾಗಿ ಪ್ರಯತ್ನಿಸೋಣ. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಯಲ್ಲಿ ಹೊನ್ನಾವರ ಸಂಘವು ಕ್ರಿಯಾಶೀಲವಾಗಿ ಭಾಗವಹಿಸುತ್ತಿರುವುದು ಖುಷಿಯ ಸಂಗತಿ’ ಎಂದರು.

ಸನ್ಮಾನಿತ ಸತೀಶ ತಾಂಡೇಲ್ ಮಾತನಾಡಿ, ನಾವೆಲ್ಲರೂ ಒಂದಾಗಿ ಮುನ್ನಡೆಯೋಣ. ಸಂಘದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶ್ವಸಿಯಾಗಿಸೊಣ ಎಂದರು. ತಾಲೂಕು ಸಂಘದ ಅಧ್ಯಕ್ಷ ವಿನಾಯಕ ಮೇಸ್ತ, ಖಜಾಂಚಿ ವಿವೇಕ ಶೇಟ್, ಸದಸ್ಯರಾದ ಮುರಳೀಧರ ಗಾಯತೊಂಡೆ, ವಿಶ್ವನಾಥ ಸಾಲ್ಕೋಡ, ನಾಗರಾಜ ನಾಯ್ಕ, ಶಿವಾನಂದ ಮೇಸ್ತ, ಶ್ರೀಧರ ನಾಯ್ಕ, ಎಚ್.ಎಲ್.ನಗರೆ, ಉಪಸ್ಥಿತರಿದ್ದರು.

About The Author

error: Content is protected !!