ಭಾವನಾ ಸುದ್ಧಿ ಬೈಂದೂರು : ಪಟ್ಟಣ ಪಂಚಾಯತಿನಿAದ ಗ್ರಾಮೀಣ ಪ್ರದೇಶಗಳನ್ನು ಬೇರ್ಪಡಿಸಿ ಗ್ರಾಮ ಪಂಚಾಯತಿ ರಚನೆ ಮಾಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘದ ನೇತೃತ್ವದಲ್ಲಿ ತಾಲೂಕು ಆಡಳಿತ ಕಛೇರಿ ಎದುರು 65 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಪ್ರತಿಭಟನಾ ಸ್ಥಳಕ್ಕೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿದರು.
ಬಳಿಕ ಮಾತನಾಡಿದ ಸಂಸದರು, ಬೈಂದೂರು ತಾಲೂಕಾಗಿ ಪರಿವರ್ತನೆಯಾದ ಮೇಲೆ ತಾಲೂಕು ಕೇಂದ್ರ ಪುರಸಭೆ ಅಥವಾ ಪಟ್ಟಣ ಪಂಚಾಯತ್ ರಚನೆಯಾಗುವುದರ ಮೂಲಕ ಅಭಿವೃದ್ಧಿ ಹೊಂದಬಹುದಾಗಿದೆ ಆದರೆ ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗಗಳು ಸೇರಿರುವುದರಿಂದ ಗ್ರಾಮೀಣ ಭಾಗದ ರೈತರಿಗೆ ಅನ್ಯಾಯವಾಗಿದೆ. ಮುಂದೆ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಶಾಸಕರೊಂದಿಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು.
ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ರೈತ ಸಂಘದ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ವೀರಭದ್ರ ಗಾಣಿಗ, ಅರುಣಕುಮಾರ ಶಿರೂರು, ನೂರಾರು ರೈತರು ಇದ್ದರು.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು


More Stories
ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ
ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸವಲತ್ತು ವಿತರಣಾ ಕಾರ್ಯಕ್ರಮ
ಮಹತೋಭಾರ ಸೇನೇಶ್ವರ ದೇವಸ್ಥಾನ ಉತ್ಸವ ಮೂರ್ತಿ ವನಭೋಜನ