December 23, 2025

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾರವರು ಮಂಗಳವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದ ಅವರು 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ದಾಂಡೇಲಿ ನಡೆಯುತ್ತಿರುವುದು ನಿಜಕ್ಕೂ ಕೂಡ ಸಂತಸದ ಸಂಗತಿ. ಈ ಸಮ್ಮೇಳನವನ್ನ ಯಶಸ್ವಿಗೊಳಿಸುವುದು ಎಲ್ಲರ ಜವಾಬ್ದಾರಿ. ಈ ನುಡಿ ಹಬ್ಬದಲ್ಲಿ ಜಿಲ್ಲೆಯ ಎಲ್ಲ ಜನತೆ ಭಾಗವಹಿಸುವಂತಾಗಬೇಕು. ಆ ಮೂಲಕ ಕನ್ನಡ ಕಟ್ಟುವ ಹಾಗೂ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ, ಸಾಂಸ್ಕೃತಿಕ ಮನಸ್ಥಿತಿಯನ್ನು ರೂಪಿಸುವ ಕೆಲಸವಾಗಬೇಕಿದೆ ಎಂದರು. ಈ ಸಂದರ್ಭದಲ್ಲಿ , ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ, ಕಾರವಾರ ಕಸಾಪ ಅಧ್ಯಕ್ಷ ರಾಮಾ ನಾಯ್ಕ, ದಾಂಡೇಲಿ ಕಸಾಪ ಕೋಶಾಧ್ಯಕ್ಷ ಶ್ರೀಮಂತ ಮದರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About The Author

error: Content is protected !!