December 23, 2025

ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಸಭೆ ಜರುಗಿತು,

ಭಟ್ಕಳ : ಗ್ರಾಮ ಅಭಿವೃದ್ಧಿಗೆ ಸಂಬAಧಿಸಿದ ಹಲವು ಪ್ರಮುಖ ವಿಷಯಗಳು ಸಭೆಯಲ್ಲಿ ಚರ್ಚಿಸಲ್ಪಟ್ಟವು. ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಶ್ರೀಮತಿ ನಾಗವೇಣಿ ಗೊಂಡ ಸಭೆಗೆ ಅಧ್ಯಕ್ಷತೆ ವಹಿಸಿದ್ದು, ಉಪಾಧ್ಯಕ್ಷರು, ಸದಸ್ಯರು, ನೋಡ್‌ಲ್ ಅಧಿಕಾರಿ, ಪಂಚಾಯತ್ ಸಿಬ್ಬಂದಿ, ತಾಲೂಕ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ, ಬಾಕಿ ಉಳಿದಿರುವ ಕೆಲಸಗಳು ಹಾಗೂ ಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳು ವಿವರ ನೀಡಿದರು. ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ರಸ್ತೆ, ನೀರು, ಡ್ರೈನೇಜ್, ಬೆಳಕು ಮತ್ತು ಇತರ ಮೂಲಭೂತ ಸೌಕರ್ಯಗಳಿಗೆ ಸಂಬAಧಿಸಿದ ಬೇಡಿಕೆಗಳನ್ನು ಸಭೆಯಲ್ಲಿ ಮುನ್ನಡೆಸಿದರು.

ಮುಂದಿನ ಸಾಲಿನ ಪಂಚಾಯತ್ ಅಭಿವೃದ್ಧಿ ಯೋಜನೆಗಳ ತಯಾರಿಕೆಗೆ ಸಂಬAಧಿಸಿದAತೆ ಸಾರ್ವಜನಿಕರ ಸಲಹೆ ಸೂಚನೆಗಳನ್ನು ಸಂಗ್ರಹಿಸಲಾಯಿತು. ಗ್ರಾಮದಲ್ಲಿ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಕುಡಿಯುವ ನೀರು ಹಾಗೂ ಮಹಿಳಾ ಮಕ್ಕಳ ಕಲ್ಯಾಣಕ್ಕೆ ಸಂಬAಧಿಸಿದ ಹೊಸ ಯೋಜನೆಗಳನ್ನು ಜಾರಿಗೆ ತರಲು ಹಾಗೂ ಕೆಲ ಯೋಜನೆಗಳಲ್ಲಿ ಬಲಪಡಿಸುವ ಕ್ರಮಕ್ಕೆ ಸದಸ್ಯರು ಒಮ್ಮತ ವ್ಯಕ್ತಪಡಿಸಿದರು.

ಸಭೆಯ ಕೊನೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಗ್ರಾಮಾಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ ಎಂದು ಒತ್ತಿಹೇಳಲಾಯಿತು.

About The Author

error: Content is protected !!