ಕುಮಟಾ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ , ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕುಮಟಾ ಆರ್ .ಈ.ಎಸ್. ಪ್ರೌಢಶಾಲೆ ಹಳದಿಪುರ, ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು .ಪ್ರೌಢಶಾಲಾ ಶಿಕ್ಷಕರ ವಿಭಾಗದಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯ ಶಿಕ್ಷಕರಾದ ಮಹಾದೇವ ಬೊಮ್ಮು ಗೌಡ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿಗಳನ್ನೂ ಸಹ ರಾಜ್ಯ ಹಾಗೂ ರಾಷ್ಟ್ರಮಟ್ಟದವರೆಗಿನ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಭಾಗವಹಿಸಲು ಮಾರ್ಗದರ್ಶನ ಮಾಡಿದ್ದಾರೆ. ಅವರ ಸತತ ಪರಿಶ್ರಮವೇ ಈ ಸಾಧನೆಗೆ ಕಾರಣವಾಗಿದೆ.
ಈ ಸಾಧನೆಗೆ ಹೈಸ್ಕೂಲ್ ಆಡಳಿತ ಮಂಡಳಿಯ ಮಹಾತ್ಮ ಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್. ನಾಯಕ, ಹಿರೇಗುತ್ತಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶಾಂತಾ ಎನ್. ನಾಯಕ, ಧರ್ಮದರ್ಶಿಗಳು ಸುನೀಲ್ ಪೈ, ಆಡಳಿತ ಮಂಡಳಿ ಕಾರ್ಯದರ್ಶಿ ಮೋಹನ ಬಿ. ಕೆರೆಮನೆ, ಉಪಾಧ್ಯಕ್ಷ ಶ್ರೀಕಾಂತ ನಾಯಕ, ಹೈಸ್ಕೂಲ್ ಮುಖ್ಯಾಧ್ಯಾಪಕ ವಿಶ್ವನಾಥ ಬೇವಿನಕಟ್ಟಿ, ಶಿಕ್ಷಕ ವೃಂದದವರು, ಶ್ರೀ ಬ್ರಹ್ಮಜಟಗ ಯುವಕ ಸಂಘದ ಅಧ್ಯಕ್ಷ ಆಕಾಶ ನಾಯಕ ಹಾಗೂ ಸರ್ವ ಸದಸ್ಯರು, ಜೊತೆಗೆ ಊರಿನ ನಾಗರಿಕರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

More Stories
ನೆಲ್ಲಿಕೇರಿ ಹೈಸ್ಕೂಲಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಕುಮಟಾದಲ್ಲಿ ತಾಲುಕಾ ಮಟ್ಟದ ವಿಜ್ಞಾನ ವಿಷಯದ ಕಾರ್ಯಗಾರ
ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಸಂಘಟಿಸುವ ಗುಣ ಹೊಳೆಗದ್ದೆ ನೆಲಕ್ಕಿದೆ ಎಂದು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಹೇಳಿದರು.