December 23, 2025

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ದಾಳಿ

ಹೊನ್ನಾವರ : ನಗರದ ಪ್ರಭಾತನಗರ ಸುತ್ತಮುತ್ತ ಅಂಗಡಿಗಳ ಮೇಲೆ ತಹಶೀಲ್ದಾರ ಪ್ರವೀಣ ಕರಂಡೆ ನೇತೃತ್ವದ ತಂಬಾಕು ನಿಯಂತ್ರಣ ಸಮಿತಿಯ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಿ 3800=00 ರೂಪಾಯಿ ದಂಡ ವಿಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಪುನಾವರ್ತನೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.

ತಾಲೂಕ ಆರೋಗ್ಯಾಧಿಕಾರಿಗಳಾದ ಡಾ|| ಉಷಾ ಹಾಸ್ಯಗಾರ ಸೇರಿದಂತೆ ತಂಬಾಕು ನಿಯಂತ್ರಣ ಸಮಿತಿಯ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ ಎಸ್ ಸಹಕರಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!