ಹೊನ್ನಾವರ : ನಗರದ ಪ್ರಭಾತನಗರ ಸುತ್ತಮುತ್ತ ಅಂಗಡಿಗಳ ಮೇಲೆ ತಹಶೀಲ್ದಾರ ಪ್ರವೀಣ ಕರಂಡೆ ನೇತೃತ್ವದ ತಂಬಾಕು ನಿಯಂತ್ರಣ ಸಮಿತಿಯ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಿ 3800=00 ರೂಪಾಯಿ ದಂಡ ವಿಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಪುನಾವರ್ತನೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ತಾಲೂಕ ಆರೋಗ್ಯಾಧಿಕಾರಿಗಳಾದ ಡಾ|| ಉಷಾ ಹಾಸ್ಯಗಾರ ಸೇರಿದಂತೆ ತಂಬಾಕು ನಿಯಂತ್ರಣ ಸಮಿತಿಯ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ ಎಸ್ ಸಹಕರಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
ಉಪ್ಪೋಣಿ ಶ್ರೀ ನಾಗಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅ.11ರಿಂದ ನವರಾತ್ರಿ ಉತ್ಸವ
ಹಡಿನಬಾಳ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ: ಸ್ವಚ್ಛತಾ ಕಾರ್ಯಕ್ರಮ ಹಾಗೂ ಸನ್ಮಾನ
‘ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು’: ರಾಜ್ಯ ಪ್ರಶಸ್ತಿ ಪುರಸ್ಕೃತೆ ಮಮತಾ ನಾಯ್ಕ್ಗೆ ಸನ್ಮಾನ