December 23, 2025

ಸದನದಲ್ಲಿ ವಿ ಸುನಿಲ್ ಕುಮಾರ್ ಧ್ವನಿ

ಅನುದಾನ ಘೋಷಣೆಯಾಗಿ ಸರ್ಕಾರದ ಮಂಜೂರಾತಿಯಾಗಿ ಒಂದು ವರ್ಷ ಕಳೆದರೂ ಈವರೆಗೆ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆ ಆಗದ ಕುರಿತು ಸದನದಲ್ಲಿ ವಿ ಸುನಿಲ್ ಕುಮಾರ್ ಧ್ವನಿ

2024 25 ನೇ ಸಾಲಿನ ರಾಜ್ಯದಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಂದರ್ಭದಲ್ಲಿ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಶಾಸಕರಿಗೆ ತಲಾ 10.00 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ದಿನಾಂಕ 17.01.2025 ರಂದು ಸರಕಾರದ ಅಧಿಕೃತ ಆದೇಶ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ತಲಾ 10 ಕೋಟಿ ಅನುದಾನಕ್ಕಾಗಿ ಕ್ರಿಯಾಯೋಜನೆ ಸಲ್ಲಿಸುವಂತೆ ತಿಳಿಸಲಾಗಿತ್ತು, ರಾಜ್ಯದ ಶಾಸಕರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಹಾಗೂ ಸೇತುವೆಗಳ ಸುಧಾರಣೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಸುಮಾರು 56 ಗ್ರಾಮೀಣ ರಸ್ತೆಗಳ ಸುಧಾರಣೆಗೆ ದಿನಾಂಕ 21.05.2025 ರಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಮುಖಾಂತರ ಕ್ರಿಯಾ ಯೋಜನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಕ್ರಿಯಾಯೋಜನೆಗೆ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಈವರೆಗೆ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈವರೆಗೆ ಆಗಿರುವುದಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಳೆದ 2 ವರ್ಷಗಳಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಗ್ರಾಮೀಣ ರಸ್ತೆಗಳು ಸೇರಿದಂತೆ ಮುಖ್ಯರಸ್ತೆಗಳು ಯಾವುದೇ ನಿರ್ವಹಣೆ ಇಲ್ಲದೇ ಸಂಪೂರ್ಣವಾಗಿ ಹಾಳಾಗಿದ್ದು, ಸಾರ್ವಜನಿಕರ ಸುಗಮ‌ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗಿರುತ್ತದೆ.

ಅನುದಾನ ಘೋಷಣೆಯಾಗಿ ಸರ್ಕಾರದ ಮಂಜೂರಾತಿಯಾಗಿ ಒಂದು ವರ್ಷ ಕಳೆದರೂ ಈವರೆಗೆ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆ ಆಗಿರುವುದಿಲ್ಲ ಅನುದಾನ ಬಿಡುಗಡೆಯಾಗದೇ ಇರುವುದರಿಂದ ರಸ್ತೆಗಳು ತುಂಬಾ ಹಾನಿಯಾಗಿದ್ದು ಸಾರ್ವಜನಿಕ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗಿರುವುದು ಕಂಡುಬಂದಿರುತ್ತದೆ. ಅನುದಾನ ಬಿಡುಗಡೆಯಾಗದ ಕುರಿತು ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ಸರಕಾರದ ಗಮನ ಸೆಳೆದು ಅನುದಾನ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಕೂಡಲೇ 10.00 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲಾಯಿತು.

-ವರದಿ: ಅರುಣ ಭಟ್ ಕಾರ್ಕಳ

About The Author

error: Content is protected !!