ಭಟ್ಕಳ : ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಹಾಗೂ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ, 14 ನವೆಂಬರ್ 2025 ರಿಂದ 24 ಜನವರಿ 2025ರವರೆಗೆ ನಡೆಯುತ್ತಿರುವ 10 ವಾರಗಳ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಆರಂಭಗೊAಡಿದೆ. ಅದರ ಅಂಗವಾಗಿ ಇಂದು ವಿಶೇಷ ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಸಭೆಯಲ್ಲಿ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹಪೂರ್ವಕವಾಗಿ ಭಾಗವಹಿಸಿ, ತಮ್ಮ ಶಾಲೆ ಮತ್ತು ವಾರ್ಡ್ ಮಟ್ಟದ ಸಮಸ್ಯೆಗಳು, ಅಗತ್ಯಗಳು ಮತ್ತು ಸಲಹೆಗಳನ್ನು ಮಂಡಿಸಿದರು. ಸಭೆಯ ವಿಶೇಷತೆ ಎಂದರೆ, ಮಕ್ಕಳೇ ಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಾಗಿ ಕಾರ್ಯನಿರ್ವಹಿಸಿ ನಾಯಕತ್ವವನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನದಲ್ಲಿ ಕೈಗೊಳ್ಳಲಾದ ಚಟುವಟಿಕೆಗಳ ಕುರಿತು ವಿವರಿಸಲು ಜೊತೆಗೆ ‘ಮಕ್ಕಳ ದನಿ ಪೆಟ್ಟಿಗೆ’ಯನ್ನು ತೆರೆಯಲಾಗಿದ್ದು, ಮಕ್ಕಳಿಂದ ಬಂದ ಮನವಿಗಳು ಮತ್ತು ಪ್ರಶ್ನೆಗಳ ಕುರಿತು ತಕ್ಷಣದ ಪರಿಹಾರ ಕ್ರಮಗಳನ್ನು ಚರ್ಚಿಸಲಾಯಿತು.
ಈ ಕಾರ್ಯಕ್ರಮಕ್ಕೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಮಾನ್ಯ ಉಪನಿರೀಕ್ಷಕರು ಆಗಮಿಸಿ ಮಕ್ಕಳಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ ಮತ್ತು ಮೊಬೈಲ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದರು. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮಕ್ಕಳ ಆರೋಗ್ಯ, ಪೌಷ್ಠಿಕ ಆಹಾರ ಹಾಗೂ ಆರೋಗ್ಯ ಕಾಳಜಿ ಕುರಿತ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಎಂ.ಡಿ. ನಾಯ್ಕ ಅವರು ಮಾತನಾಡಿ ಮಾರುಕೇರಿ ಗ್ರಾಮ ಪಂಚಾಯತ್ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗವೇಣಿಗೊಂಡರವರು ಮಾತನಾಡಿ ಮಕ್ಕಳಿಂದ ಬಂದ ಎಲ್ಲ ಸಮಸ್ಯೆಗಳ ಕ್ರೂಡಿಕೃತಗೊಳಿಸಿ ಆದ್ಯತೆಯ ಮೇರೆಗೆ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಸಭೆಯನ್ನು ಯಶಸ್ವಿಗೊಳಿಸಲು ಸಹಕರಿಸಿದ ಶಿಕ್ಷಕರು, ನೌಕರರು, ಅಂಗನವಾಡಿ ಮೇಲ್ವಿಚಾರಕರು, ಸಿಬ್ಬಂದಿಗಳು, ಎಸ್ ಡಿ ಎಂ ಸಿ, ಮತ್ತು ವಿದ್ಯಾರ್ಥಿಗಳಿಗೆ ಅವರು ಧನ್ಯವಾದಗಳನ್ನು ತಿಳಿಸಿದರು.
ಸಭೆಯ ಅಂತ್ಯದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ಕ್ರೀಡಾ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯಿAದ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.

More Stories
ಶ್ರೀವಲಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ
ಹಿಂದು ರುದ್ರಭೂಮಿ ಸ್ವಚ್ಛಗೊಳಿಸಿದ ಕ್ರಿಯೇಟಿವ್ ಬಾಯ್ಸ್ ಯುವಕರು