December 23, 2025

ಭಟ್ಕಳ ತಹಶೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಸ್ಫೋಟ ಬೆದರಿಕೆ ಮೇಲ್

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಹಶೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಮೇಲ್ ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ತಕ್ಷಣ ತೆರವುಗೊಳಿಸಿ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಉಲ್ಲೇಖಿಸಿ, ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ ಎಂಬ ಈ ಮೇಲ್ ಐಡಿಯಿಂದ ಬೆಳಿಗ್ಗೆ 7.25ರ ಸುಮಾರಿಗೆ ದುಷ್ಕರ್ಮಿಯೊಬ್ಬನು ಸಂದೇಶ ರವಾನಿಸಿದ್ದಾನೆ.

ಬಾಂಬ್ ಸ್ಫೋಟದ ಬೆದರಿಕೆಯೊಂದಿಗೆ, ಮೇಲ್ ಬಾಡಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಬರಹಗಳನ್ನೂ ಉಲ್ಲೇಖಿಸಲಾಗಿದೆ. 2001ರಲ್ಲಿ ಮಾಧ್ಯಮಗಳ ಮೇಲೆ ದಬ್ಬಾಳಿಕೆ ನಡೆಸಲು ಯತ್ನಿಸಲಾಗಿದೆ, ಗೆಲಿಲಿಯೋ ಆ್ಯಪ್ ಮೂಲಕ ಕನ್ನಡಿಗರ ಮೇಲೆ ಗೂಡಾಚಾರ ನಡೆದಿದೆ ಎನ್ನುವ ಆರೋಪಗಳನ್ನೂ ಮೇಲ್‌ನಲ್ಲಿ ಮಾಡಲಾಗಿದೆ. ಅಲ್ಲದೆ, ಅನಾಥಾಶ್ರಮಗಳ ಹೆಣ್ಣುಮಕ್ಕಳನ್ನು ಲೈಂಗಿಕ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ಗಂಭೀರ ಹಾಗೂ ಆಧಾರರಹಿತ ಆರೋಪಗಳನ್ನೂ ಒಳಗೊಂಡಿದೆ.

ಈ ಬೆದರಿಕೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ತೀವ್ರವಾಗಿ ಪರಿಶೀಲಿಸಲಾಗುತ್ತಿದೆ.

ಈ ಹಿಂದೆ ಭಟ್ಕಳ ಶಹರ ಠಾಣೆಗೆ ಸಹ ಇಂತಹ ಬಾಂಬ್ ಬೆದರಿಕೆ ಬಂದಿದ್ದು, ಆ ಪ್ರಕರಣದಲ್ಲಿ ತಮಿಳುನಾಡು ಮೂಲದ ಇಬ್ಬರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಭಟ್ಕಳದಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿರುವುದರಿAದ, ಈ ಸಂಬAಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

About The Author

error: Content is protected !!