ಹೊನ್ನಾವರ; ಯಾವುದೇ ಗೊಂದಲವಿಲ್ಲದೇ ಮಂಕಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ 18 ಸ್ಥಾನದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಮಂಕಿಯ ಪ್ರಥಮ ಪ.ಪಂ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಖಾಸಗಿ ಹೊಟೇಲನಲ್ಲಿ ಗುರುವಾರ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಮಂಕಿ ಪ.ಪಂ.ಮೆಲ್ದರ್ಜೆಗೆ ಏರಿಸಲಾಗಿತ್ತು. 20 ವಾರ್ಡನಲ್ಲಿ 18 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು,ಬಿಜೆಪಿ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕೇಂದ್ರ ಸರಕಾರ, ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ, ಭಟ್ಕಳ- ಹೊನ್ನಾವರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾಗ ಮಾಡಿದ ಅಭಿವೃದ್ದಿ ಕಾರ್ಯಗಳ ಬಗ್ಗೆ ಜನರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕನಿಷ್ಠ 15 ರಿಂದ 16 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಶಿವಾನಂದ ನಾಯ್ಕ ಮಾತನಾಡಿ ಮಂಕಿ ಭಾಗದ ಜನರ ನಾಡಿಮಿಡಿತ ಗೊತ್ತಿದೆ. ಮಂಕಿಯ ಜನರು ಹಿಂದಿನಿAದಲೂ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ತಾನು ಸಚಿವನಾಗಿದ್ದಾಗ ಮಂಕಿಗೆ ಸರಕಾರಿ ಪ್ರೌಢಶಾಲೆ,- ಕಾಲೇಜು ಮಂಜೂರಾತಿ ಮಾಡಿಸಿದ್ದೇನೆ. ಏತನೀರಾವರಿ ಮಂಜೂರಿ ಮಾಡಿಸಿದ್ದು ನಂತರ ಬಂದ ಕಾಂಗ್ರೆಸ್ ಸರಕಾರ ಅದನ್ನು ಜಾರಿಗೆ ತರಲಿಲ್ಲ. ಬಿಜೆಪಿ ಇದ್ದಾಗ ಆಗಿರುವ ಅಭಿವೃದ್ಧಿ ಕೆಲಸಗಳು ಜನರಿಗೆ ನೆನಪಿವೆ. ಈಗ ಕಾಂಗ್ರೆಸ್ ಸರಕಾರ ಇದ್ದಾಗ ಏನಾಗಿದೆ ಎಂದು ಜನರು ತುಲನೆ ಮಾಡುತ್ತಿದ್ದಾರೆ. ನಮ್ಮ ಅಭಿವೃದ್ದಿ ಕಾರ್ಯಗಳೆ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಿರಕ್ಷೆಯಾಗಿದೆ. ಕಾಂಗ್ರೆಸ್ ವಾಮಮಾರ್ಗದಲ್ಲಿ ಗೆಲ್ಲಲು ನೋಡುತ್ತಿದೆ. ಜನರು ಅದಕ್ಕೆ ಅವಕಾಶ ಕೊಡುವುದಿಲ್ಲ. ಬಿಜೆಪಿ ಹದಿನೆಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು 13-15 ಸೀಟುಗಳನ್ನು ಗೆಲ್ಲಲಿದೆ ಎಂದರು.
ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ ಭೌಗೋಳಿಕವಾಗಿ ದೊಡ್ಡ ಗ್ರಾಮ ಪಂಚಾಯತಿಯಾಗಿದ್ದ ಮಂಕಿಯ ಅಭಿವೃದ್ದಿಗೆ ಅನುದಾನ ಸಾಕಾಗುತ್ತಿರಲಿಲ್ಲ. ಮಾಜಿ ಸಂಸದರಾದ ಅನಂತಕುಮಾರ ಹೆಗಡೆಯವರು ಮಂಕಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಪರಿವರ್ತಿಸವಂತೆ ತಾಕೀತು ಮಾಡಿದ್ದರು. ಅದಕ್ಕೆ ಸಂಬAಧಿಸಿದ ಕಾಗದಪತ್ರಗಳನ್ನು ಒದಗಿಸಿದೆ. ನಮ್ಮ ಸರಕಾರವಿದ್ದಾಗ ಪಟ್ಟಣ ಪಂಚಾಯತಿ ಆಗಿತ್ತು. ಈ ಹಿಂದೆ ನನ್ನ ಶಾಸಕ ಅವಧಿಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ 36 ಹಾಸಿಗೆಯ ಆಸ್ಪತ್ರೆ ಕಟ್ಟಡ ಕಟ್ಟಿಸಲಾಗಿದೆ. 256 ಕೋಟಿ ರೂ. ಕುಡಿಯುವ ನೀರಿನ ಯೋಜನೆ ಮಂಜೂರಾತಿ ನೀಡಿದ್ದೇನೆ. ಖಾರ್ಲ್ಯಾಂಡ್, ರಸ್ತೆ ಮುಂತಾದ ಹಲವಾರು ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ. ರಾಮಕ್ಷತ್ರಿಯ ಸಮಾವೇಶಕ್ಕೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮಂಕಿಗೆ ಆಗಮಿಸಿದ್ದರು. ಕೊಕ್ಕೇಶ್ವರ ದೇವಸ್ಥಾನಕ್ಕೆ ಒಂದುಕೋಟಿ ರೂ. ಅನುದಾನ ನೀಡಿದ್ದರು.
ಈಗಿನ ಸಚಿವರು ಅಭಿವೃದ್ಧಿ ಮಾಡದೇ ಚುನಾವಣೆಯಲ್ಲಿ ಆಮಿಷ ಒಡ್ಡುತ್ತಿದ್ದಾರೆ. ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಜನ ಅದಕ್ಕೆ ಬೆಲೆ ಕೊಡುವುದಿಲ್ಲ. ಬಿಜೆಪಿ 15 ರಿಂದ 16 ಸ್ಥಾನ ಗೆಲ್ಲಲು ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು. ಮಾಜಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿದರು. ಬಿಜೆಪಿ ಮಂಕಿ ಮಂಡಲಾಧ್ಯಕ್ಷ ಮಂಜುನಾಥ ನಾಯ್ಕ ಮುಖಂಡರಾದ ಎಂ.ಜಿ.ನಾಯ್ಕ, ರಾಜೇಶ ಭಂಡಾರಿ, ಶ್ರೀಕಲಾ ಶಾಸ್ತ್ರಿ, ದೀಪಕ ನಾಯ್ಕ, ಎಂ.ಎಸ್. ಹೆಗಡೆ ಕಣ್ಣಿ, ಜಿ.ಎಸ್.ಗುನಗ, ಗಣಪತಿ ನಾಯ್ಕ ಬಿಟಿ, ಗಣಪತಿ ಗೌಡ ಚಿತ್ತಾರ, ಯೋಗೇಶ ಮೇಸ್ತ, ಗೋವಿಂದ ಗೌಡ, ಪ್ರಮೋದ ನಾಯ್ಕ, ಶಿವರಾಜ ಮೇಸ್ತ, ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ, ಎಂ.ಜಿ.ಆಚಾರಿ ಮತ್ತಿತರರು ಉಪಸ್ಥಿತರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಕೆರೆಕೋಣ ಶಾಲೆಯಲ್ಲಿ ಶಿಕ್ಷಕಿ ಲಲಿತಾ ಹೆಗಡೆಯವರಿಗೆ ಬೀಳ್ಕೊಡುಗೆ ಮತ್ತು CCTV ಉದ್ಘಾಟನಾ ಕಾರ್ಯಕ್ರಮ ಸಂಪನ್ನ
ಶ್ರೀ ಸತ್ಯಸಾಯಿ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಯಶಸ್ವಿಯಾಗಿ ಸುಸಂಪನ್ನ
ಉತ್ತರ ಕನ್ನಡ ಜಿಲ್ಲಾ ಕ್ಯಾಥೋಲಿಕ್ ಸಂಘಟನೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಕ್ರಿಸ್ಮಸ್ ಗೀತಾ ಸ್ಪರ್ಧಾ ಕಾರ್ಯಕ್ರಮ