ಭಟ್ಕಳ : ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮಂಗಳೂರು ಮತ್ತು ಸರ್ಕಾರಿ ಪ್ರೌಢಶಾಲೆ ತೆಂಗಿನಗುAಡಿ ಭಟ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಒಂದೇ ಮಾತರಂ ಗೀತೆಯ 150ರ ವರ್ಷಾಚರಣೆ ಮತ್ತು ವಿಕಸಿತ ಭಾರತ 2047ರ ಕಾರ್ಯಕ್ರಮವನ್ನು ತೆಂಗಿನಗುAಡಿ ಪ್ರೌಢಶಾಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಕರ್ನಾಟಕ ಸಂಗೀತ ಮತ್ತು ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಬಂಟದೇವ ಯುವಕ ಸಂಘ ಆಮದಳ್ಳಿ, ಕಾರವಾರ ಇವರು ನಡೆಸಿಕೊಟ್ಟ ಜಾನಪದ ನೃತ್ಯ ಮತ್ತು ವಿಕಸಿತ ಭಾರತ ಕುರಿತ ಜಾಗೃತಿ ಪ್ರಹಸನಗಳು ಮನಸೂರೆಗೊಂಡವು. ನಂತರ ಸಭಾ ಕಾರ್ಯಕ್ರಮವನ್ನು ಶಾಲೆಯ ವಿದ್ಯಾರ್ಥಿಗಳ ಸುಮಧುರ ಪ್ರಾರ್ಥನೆ ಮತ್ತು ದೀಪ ಬೆಳಗುವುದರ ಮೂಲಕ ಉದ್ಘಾಟಿಸಲಾಯಿತು. ಬಂದAತಹ ಸರ್ವರನ್ನು ಶಾಲೆಯ ಮುಖ್ಯ ಗುರುಗಳಾದ ಶ್ರೀ ಸಂತೋಷ್ ಶ್ರೇಷ್ಠಿ ರವರು ಸ್ವಾಗತಿಸಿದರು. ಕೇಂದ್ರ ಸಂವಹನ ಇಲಾಖೆ ಮಂಗಳೂರು ಇಲ್ಲಿಯ ಕ್ಷೇತ್ರ ಪ್ರಚಾರಾಧಿಕಾರಿಗಳಾದ ಶ್ರೀ ರೋಹಿತ್ ಜಿ.ಎಸ್ ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸರ್ವರೂ ಒಂದೇ ಮಾತರಂ ಗೀತೆಯನ್ನು ಹಾಡಿದರು. ಶಾಲೆಯ ಕನ್ನಡ ಶಿಕ್ಷಕರಾದ ಶ್ರೀ ಗೋವಿಂದ್ ಪಟಗಾರ ಅವರು ಒಂದೇ ಮಾತರಂ ಗೀತೆಯ ಮಹತ್ವವನ್ನು ಸವಿಸ್ತಾರವಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವೆಂಕಟೇಶ್ ನಾಯಕ ರವರು ಕಾರ್ಯಕ್ರಮದ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀ ಮೋಹನ್ ದೇವಾಡಿಗ ಮತ್ತು ಹೆಬಳೆ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ನಾಯ್ಕ್ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ಷೇತ್ರ ಸಂಪನ್ಮೂಲ ಕೇಂದ್ರ ಭಟ್ಕಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀ ಸಂಜೀವ್ ಭಂಡಾರಿ ಅವರು ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

More Stories
ಶ್ರೀವಲಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ
ಹಿಂದು ರುದ್ರಭೂಮಿ ಸ್ವಚ್ಛಗೊಳಿಸಿದ ಕ್ರಿಯೇಟಿವ್ ಬಾಯ್ಸ್ ಯುವಕರು