December 23, 2025

ಭಟ್ಕಳದಲ್ಲಿ ಜನವರಿ 28ಕ್ಕೆ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ: ಪೋಸ್ಟರ್ ಬಿಡುಗಡೆ

ಭಟ್ಕಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜನವರಿ 28ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿರುವ ಶ್ರೀ ನಾಗಯಕ್ಷೇ ಧರ್ಮಾರ್ಥ ಸಭಾಭವನದಲ್ಲಿ ಭವ್ಯವಾಗಿ ನಡೆಯಲಿದೆ.
ಪತ್ರಕರ್ತರ ವೃತ್ತಿಪರ ಸಮಸ್ಯೆಗಳು, ಮಾಧ್ಯಮ ಕ್ಷೇತ್ರದ ಸವಾಲುಗಳು, ಮೌಲ್ಯಾಧಾರಿತ ಪತ್ರಿಕೋದ್ಯಮ ಹಾಗೂ ಸಮಕಾಲೀನ ವಿಚಾರಗಳ ಕುರಿತು ರಾಜ್ಯದ ವಿವಿಧ ಜಿಲ್ಲೆಗಳ ಹಿರಿಯ-ಕಿರಿಯ ಪತ್ರಕರ್ತರು ಒಂದೇ ವೇದಿಕೆಯಲ್ಲಿ ವಿಚಾರ ವಿನಿಮಯ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ಗೌರವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಈ ಕಾರ್ಯಕ್ರಮದ ಪೋಸ್ಟರ್ ಅನ್ನು ಇತ್ತೀಚೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿರುವ ಶ್ರೀ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ ಬಿಡುಗಡೆಗೊಳಿಸಲಾಯಿತು. ಪರಮಪೂಜ್ಯ ಹನುಮಂತನಾಥ ಮಹಸ್ವಾಮಿಗಳು ಹಾಗೂ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಪರಮಪೂಜ್ಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಅವರು ಪೋಸ್ಟರ್ ಅನಾವರಣಗೊಳಿಸಿದ್ದರು.
ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಟಿ.ಓ. ಹನುಮಂತರಾಯಪ್ಪ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಭಟ್ಕಳದಲ್ಲಿ ನಡೆಯಲಿರುವ ಈ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು,
ಎಂದು ಸಂಘಟಕರು ತಿಳಿಸಿದ್ದಾರೆ.

About The Author

error: Content is protected !!