ಅಂಬರೀಶ್ ಅವರಿಗೆ ನಾಯಕತ್ವ ಗುಣಗಳಿವೆ ಮುಂದೊಂದು ದಿನ ತಾಲೂಕಿನ ಭವಿಷ್ಯದ ನಾಯಕರಾಗಿ ಹೊರ ಹೊಮ್ಮುತ್ತಾರೆ.. ಇಂದ್ರಮ್ಮ ಕೃಷ್ಣ ಆಶಯ…
ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸಂಘಟನಾ ಚತುರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್ ಅವರನ್ನು ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ವತಿಯಿಂದ ಹೃದಯ ಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು. ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಇಂದ್ರಮ್ಮ ಅವರು ಅಂಬರೀಶ್ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿ ನನ್ನ ಪೂಜ್ಯ ಪತಿಯವರಾದ ರಾಜ್ಯ ವಿಧಾನಸಭೆಯ ಮಾಜಿ ಅಧ್ಯಕ್ಷ ದಿವಂಗತ ಕೃಷ್ಣ ಅವರ ಅಪ್ಪಟ ಅಭಿಮಾನಿಯಾಗಿರುವ ಅಂಬರೀಶ್ ಅವರಿಗೆ ಉಜ್ವಲವಾದ ಭವಿಷ್ಯವಿದೆ. ಬಡವರು ಮತ್ತು ದೀನ ದಲಿತರ ಸೇವೆಯಲ್ಲಿ ಭಗವಂತನನ್ನು ಕಾಣುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿರುವ ಅಂಬರೀಶ್ ತಮ್ಮ ಜೀವನದಲ್ಲಿ ಸರಳತೆ ಹಾಗೂ ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿರುವ ಆದರ್ಶ ರಾಜಕಾರಣಿಯಾಗಿದ್ದಾರೆ. ಕೃಷ್ಣ ಅವರ ಅಪ್ಪಟ ಅನುಯಾಯಿಯಾಗಿ ಗಾಂಧಿವಾದವನ್ನು ಮೈಗೂಡಿಸಿಕೊಂಡು ಕಷ್ಟದಲ್ಲಿರುವ ಜನರಿಗೆ ಕೈಲಾದ ಸಹಾಯವನ್ನು ಮಾಡುತ್ತಿರುವ ಅಂಬರೀಶ್ ಕೃಷ್ಣರಾಜಪೇಟೆ ತಾಲೂಕಿನ ಭವಿಷ್ಯದ ನಾಯಕರಾಗಬೇಕು ಎಂಬ ಆಸೆ ನಮ್ಮ ಯಜಮಾನರಿಗಿತ್ತು. ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕುತ್ತಿರುವ ಅಂಬರೀಶ್ ಒಂದಲ್ಲ ಒಂದು ದಿನ ಕೃಷ್ಣರಾಜಪೇಟೆ ತಾಲೂಕಿನ ಭವಿಷ್ಯದ ನಾಯಕರಾಗಿ ಹೊರಹೊಮ್ಮುವುದು ಸೂರ್ಯ ಚಂದ್ರರಷ್ಟೇ ಸತ್ಯವಾಗಿದೆ ಎಂದು ಅಭಿಮಾನದಿಂದ ಹೇಳಿದ ಇಂದ್ರಮ್ಮ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಭಾರಿ ಪೈಪೋಟಿಯ ನಡುವೆಯೂ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿರುವ ಅಂಬರೀಶ್ ಬ್ಯಾಂಕಿನಲ್ಲಿ ಆಡಳಿತ ಸುಧಾರಣೆ ಮಾಡುವ ಜೊತೆಗೆ ರೈತಾಪಿ ವರ್ಗದ ಜನರು ಹಾಗೂ ಸಹಕಾರ ಸಂಘಗಳ ಆರ್ಥಿಕ ಬಲವರ್ಧನೆಗೆ ಕೆಲಸ ಮಾಡಲಿ ಎಂದು ಸಲಹೆ ನೀಡಿದರು. ಕೆ.ಆರ್. ಪೇಟೆ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಗೂಡೆಹೊಸಳ್ಳಿ ಜವರಾಯಿಗೌಡ, ಕಾರ್ಯದರ್ಶಿ ಕತ್ತರಘಟ್ಟ ವಾಸು, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಆಲೇನಹಳ್ಳಿ ಜಯರಾಜ್, ಹೆಮ್ಮನಹಳ್ಳಿ ರಮೇಶ್, ಐಚನಹಳ್ಳಿ ಶಿವಣ್ಣ, ಹಾದನೂರು ಪರಮೇಶ್, ಸಂತೆ ಬಾಚಹಳ್ಳಿ ನಾಗರಾಜು, ರಾಯ ಸಮುದ್ರ ಶಿವರಾಮೇಗೌಡ ಚನ್ನಿoಗೆಗೌಡ, ಅಂಚಿ ಸಣ್ಣ ಸ್ವಾಮಿಗೌಡ, ಬೂಕನಕೆರೆ ಜವರಾಯಿಗೌಡ, ಮರಡಹಳ್ಳಿ ಚೆನ್ನೇಗೌಡ, ಶೀಳನೆರೆ ಕೃಷ್ಣ ಸೇರಿದಂತೆ ಮಾಜಿ ಸ್ಪೀಕರ್ ಕೃಷ್ಣ ಅವರ ಅಭಿಮಾನಿಗಳು ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ವಿದ್ಯಾರ್ಥಿಗಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ಗಣಿತ ಹಾಗೂ ವಿಜ್ಞಾನ ಶಿಕ್ಷಣವು ದಾರಿ ದೀಪವಾಗಿದೆ. ಮುಖ್ಯ ಶಿಕ್ಷಕಿ ನಾಗರತ್ನ.
ಸದೃಢ, ಸಶಕ್ತ ರಾಷ್ಟ್ರದ ನಿರ್ಮಾಣಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ. ಮಲ್ಲಿಕಾರ್ಜುನ
ಬಾಲಯೇಸು ದೇವಾಲಯದ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್