ಹೊನ್ನಾವರ: ಹಿರಿಯೂರು ಸಮೀಪ ಸಂಭವಿಸಿದ ಭೀಕರ ಬಸ್ ಮತ್ತು ಲಾರಿ ಅಪಘಾತದ ಅಗ್ನಿ ದುರಂತದಲ್ಲಿ ಅಕಾಲಿಕವಾಗಿ ಮೃತಪಟ್ಟ ಭಟ್ಕಳದ ಪ್ರತಿಭಾನ್ವಿತ ಯುವತಿ ರಶ್ಮಿ ಮಹಾಲೆ ಅವರ ನಿವಾಸಕ್ಕೆ ಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಗಳ ಅಗಲಿಕೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಪೋಷಕರಿಗೆ ಧೈರ್ಯ ತುಂಬಿದ ಸಂಸದರು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಬದುಕಿ ಬಾಳಬೇಕಾಗಿದ್ದ, ಸುಂದರ ಭವಿಷ್ಯವನ್ನು ಹೊಂದಿದ್ದ ಯುವತಿಯೊಬ್ಬಳು ಇಂತಹ ಭೀಕರ ದುರಂತಕ್ಕೆ ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನಿಲ್ ನಾಯ್ಕ, ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎನ್. ಎಸ್. ಹೆಗಡೆ, ಪ್ರಮುಖರಾದ ಗೋವಿಂದ ನಾಯ್ಕ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು ಮೃತರ ಕುಟುಂಬಕ್ಕೆ ಧೈರ್ಯ ತುಂಬಿದರು.
“ಹಿರಿಯೂರು ರಸ್ತೆ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ರಶ್ಮಿ ಮಹಾಲೆ ಅವರಂತಹ ಪ್ರತಿಭಾನ್ವಿತ ಮನೆ ಮಗಳನ್ನು ಕಳೆದುಕೊಂಡಿರುವುದು ಅವರ ಕುಟುಂಬಕ್ಕೆದೊಡ್ಡ ನಷ್ಟ ವಾಗಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ತಂದೆ-ತಾಯಿ ಹಾಗೂ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುದಾಗಿ ಇದೆ ವೇಳೆ ಸಂಸದರು ತಿಳಿಸಿದರು.
ಈ ಭೀಕರ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ನಡೆದ ಈ ದುರಂತಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿದ ಪ್ರಧಾನಮಂತ್ರಿಯವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಮೂಲಕ ಧನ್ಯವಾದ ಸಲ್ಲಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ