ಭಟ್ಕಳ:ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ವಿಕಲಚೇತನ ಬಾಲಕಿ ಸಂಜನಾ (ತಂದೆ: ಸ್ವಾಮೀನಾಗನ್, ವಾಸ: ಚೆನ್ನೈ) ದೇವಸ್ಥಾನ ಎದುರು ತಮ್ಮ ಪಾಲಕರಿಂದ ತಪ್ಪಿಸಿಕೊಂಡ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಬಾಲಕಿ ಮಾತನಾಡಲು ಸಾಧ್ಯವಿಲ್ಲ, ಕಣ್ಣು ಸರಿಯಾಗಿ ಕಾಣುವುದಿಲ್ಲ ಹಾಗೂ ಕಿವಿ ಕೇಳೋದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ತಿಳಿದ ತಕ್ಷಣವೇ ಮುರುಡೇಶ್ವರ ಪೊಲೀಸ್ ಠಾಣೆ ಪೊಲೀಸರು ತಕ್ಷಣ ಶೋಧ ಕಾರ್ಯ ಆರಂಭಿಸಿದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ತೀವ್ರ ಶೋಧದ ಬಳಿಕ ಬಾಲಕಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಿಎಸ್ಐ ಹನುಮಂತ ಬಿರಾದಾರ ಹಾಗೂ ಎಎಸ್ಐ ರಾಮಚಂದ್ರ ಹೆಗಡೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಿಂದ ಬಾಲಕಿಯನ್ನು ಯಾವುದೇ ಅಪಾಯವಿಲ್ಲದೆ ರಕ್ಷಿಸಿ ಬಳಿಕ ಪಾಲಕರಿಗೆ ಹಸ್ತಾಂತರಿಸಲಾಗಿದೆ.
ಪೊಲೀಸರ ಸಮಯೋಚಿತ, ಮಾನವೀಯ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದ್ದು, ಬಾಲಕಿಯ ಪಾಲಕರು ಮುರುಡೇಶ್ವರ ಪೊಲೀಸರ ಕಾರ್ಯವನ್ನು ಮನದಾಳದಿಂದ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ