November 19, 2025

ಶಟಲ್ ಬ್ಯಾಡ್ಮಿಂಟನ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಸಾಧನೆ

ಹೊನ್ನಾವರ: ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಎಸ್ ಎಸ್ ಎಸ್ ಕೆ ಪಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶ್ರೀಯಾ ಉಮೇಶ್ ನಾಯ್ಕ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರತಾಪ್ ರಾಜ್ ಆರ್ ಎಚ್ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದಿಶಾ ಪ್ರಸನ್ನ ಭಟ್ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಅಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!