ಭಟ್ಕಳ: ತಾಲೂಕು ಮುಂಡಳ್ಳಿ ಗ್ರಾಮದ ನೀರಗದ್ದೆಯಲ್ಲಿ ನಡೆದ ಎಮ್ಮೆ ಕಡಿದು ತಲೆ ಎಸೆದ ಪ್ರಕರಣದ ಎ-1 ಆರೋಪಿಯಾದ ಅಬ್ದುಲ್ ಅಲಿಂ (ತಂದೆ ಮೊಹಮ್ಮದ ಸಾವುದ್ದಿನ್ ಜಬಾಲಿ) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ನಂತರ ಒಂದೂವರೆ ತಿಂಗಳಿನಿAದ ಆರೋಪಿ ತಲೆಮರೆಸಿಕೊಂಡಿದ್ದನು. ಶೋಧ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು, ಬೆಂಗಳೂರಿನ ಆರ್.ಟಿ. ನಗರದಲ್ಲಿ ಅವನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಭಟ್ಕಳಕ್ಕೆ ಕರೆತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದಲ್ಲಿ ಬಳಸಲಾದ ಎರಡು ಬೈಕ್‌ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಎಸ್‌ಐ ರಾಜೇಶ್ ಹಾಗೂ ನಾರಾಯಣ, ಸಿಬ್ಬಂದಿಯಾದ ಶ್ರೀಪಾದ ಮತ್ತು ವಿನೋದ ಕುಮಾರರನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ