
ಕೆ.ಆರ್.ಪೇಟೆ: ತಾಲ್ಲೂಕು ಕಿಕ್ಕೇರಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಶ್ರೀ ಕಿಕ್ಕೇರಮ್ಮ ಕ್ರಿಕೆಟರ್ಸ್ ವತಿಯಿಂದ ಕಿಕ್ಕೇರಿ ಪ್ರೀಮಿಯರ್ ಲೀಗ್ ಸೀಸನ್ 1 ಯಶಸ್ವಿಯಾಗಿ ನಡೆಯಿತು .
ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹೆಚ್.ಟಿ ಮಂಜು ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರೀಡೆಗಳನ್ನು ಅಭಿವೃದ್ಧಿಪಡಿಸುವ ಮನೋಬಾವ ಬೆಳೆಸಿಕೊಂಡು ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳ್ಳಬೇಕೆಂದರು.
ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಅವರು ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ , ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ ಎಲ್ಲ ಕ್ರೀಡಾಭಿಮಾನಿಗಳನ್ನು ಕ್ರೀಡಾಂಗಣದಲ್ಲಿ ಹಿಡಿದಿಟ್ಟುಕೊಳ್ಳುವ ಶಕ್ತಿ ಕ್ರಿಕೆಟ್ ಪಂದ್ಯಾವಳಿಗಿದೆ. ಕ್ರೀಡಾಭಿಮಾನಿಗಳಿಗೆ ಹಬ್ಬದ ವಾತಾವರಣವೇ ಸೃಷ್ಟಿಯಾಗಲಿದೆ. ಹಾಗಾಗಿ ಕ್ರಿಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಕ್ರೀಡಾಕೂಟ ನೇತೃತ್ವದ ವಹಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ ಕಿರಣ್ ಯುವಕರು ಉತ್ಸುಕತೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರತಿಭೆಯನ್ನು ಹೊರಹೊಮ್ಮಿಸಬೇಕು. ಅಲ್ಲದೇ ಯುವ ಶಕ್ತಿ ಸಂಘಟನಾತ್ಮಕ ಕ್ರಿ?ಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ ಎಂ ಕಿರಣ್,ತಾ.ಪಂ ಮಾಜಿ ಸದಸ್ಯ ಬೂಕನಕೆರೆ ಹುಲ್ಲೆಗೌಡ, ವಿ.ಎ???.ಎಸ್ದ್ಯ ಮಾಜಿ ಅಧ್ಯಕ್ಷ ಕೆ ಬಿ ಶೇಖರ್, ಲಕ್ಷ್ಮೀಪುರ ಸ್ವಾಮಿ, ಸೇರಿದಂತೆ ,ಕ್ರೀಡಾಪಟುಗಳು, ಆಯೋಜಕರು ಇದ್ದರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ಶಾಲಾ ಮಕ್ಕಳಿಗೆ ಉಪಯೋಗಕ್ಕೆ ಬಾರದ ಶೌಚಾಲಯ
ಪ್ರೆಂಡ್ಸ್ ರಿಕ್ರಿಯೇಶನ್ ಕ್ಲಬ್ (ರಿ), ಕಿಕ್ಕೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ
ರೈತರ ಮೇಲೆ ದೌರ್ಜನ್ಯ ಗ್ರಾಮಸ್ಥರಿಂದ ಪ್ರತಿಭಟನೆ