September 3, 2025

“ವಿಶ್ವ ಜನಸಂಖ್ಯಾ ದಿನಾಚರಣೆ” ಮತ್ತು “ವಿಶ್ವ ಸ್ಕಿಜೋಪ್ರೇನಿಯಾ ದಿನ” ದ ಜನಜಾಗೃತಿ ಕಾರ್ಯಕ್ರಮ

ಸಿರಸಿ : 02-09-2025 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ, ಉತ್ತರ ಕನ್ನಡ ಮತ್ತು ಗ್ರೀನ್ ಕೇರ್ ಕಲಾತಂಡದ ಸಹಯೋಗದೊಂದಿಗೆ “ವಿಶ್ವ ಜನಸಂಖ್ಯಾ ದಿನಾಚರಣೆ” ಮತ್ತು “ವಿಶ್ವ ಸ್ಕಿಜೋಪ್ರೇನಿಯಾ ದಿನ” ದ ಜನಜಾಗೃತಿ ಕಾರ್ಯಕ್ರಮವನ್ನು ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶಿರಸಿ ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಭಾರತಿ ಹೊಸಮನಿಯವರು ದೀಪ ಬೆಳಗಿಸಿ ಕಾಯ್ಕçಮವನ್ನು ಉದ್ಘಾಟಿಸಿದರು,


ನಂತರ ಮಾತನಾಡಿ ಜನಸಂಖ್ಯಾ ಸ್ಪೋಟ ಮತ್ತು ತಡೆಗಟ್ಟುವ ಬಗ್ಗೆ ಹಾಗೂ ಸ್ಕಿಜೋಪ್ರೇನಿಯಾ ಕಾಯಿಲೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ|| ಮಂಜುಳಾ ಪೂಜಾರ ವಹಿಸಿ ಮಾತನಾಡಿ ಇಂತಹ ಜನ ಜಾಗೃತಿ ಕಾರ್ಯಕ್ರಮಗಳನ್ನು ಬೀದಿ ನಾಟಕದ ಮೂಲಕ ಕಲಾತಂಡದವರು ಮಾಡುವುದರಿಂದ ಒಳ್ಳೆಯ ಪ್ರಭಾವ ಬೀರುತ್ತದೆ ಎಂದರು. ಗ್ರೀನ್ ಕೇರ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಿತೇಂದ್ರ ಕುಮಾರ್ ಆರ್. ಎಂ ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಸಂಸ್ಥೆಯ ಕಲಾತಂಡದ ಬೀದಿ ನಾಟಕದ ಮೂಲಕ ಜನ ಜಾಗ್ರತಿ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಶಿರಸಿ ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು. ನಂತರ ಗ್ರೀನ್ ಕೇರ್ ಕಲಾತಂಡಕ್ಕೆ ಡಾ. ಭಾರತಿ ಹೊಸಮನಿ ಮತ್ತು ಡಾ ||ಮಂಜುಳಾ ಪೂಜಾರ ತಮಟೆ ಬಡಿಯುವುದರ ಮೂಲಕ ಚಾಲನೆಯನ್ನು ಕೊಟ್ಟರು. ಕಲಾತಂಡದವರು ಅಭಿನಯದ ಮೂಲಕ ಜಾಗೃತಿ ಮೂಡಿಸಿದರು.


ಕಾರ್ಯಕ್ರಮವನ್ನು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ನಿರೂಪಿಸಿ ವಂದಿಸಿದರು. ಗ್ರೀನ್ ಕೇರ್ ಕಲಾತಂಡದವರಿAದ ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣ, ಕಸ್ತೂರ್ಬಾನಗರ ಮತ್ತು ಶಿರಸಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬೀದಿ ನಾಟಕದ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ತಾಲೂಕಾ ಆರೋಗ್ಯಾಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಶ್ರೀ ಮಾರಿಕಾಂಬ ದೇವಸ್ಥಾನದ ಅಧ್ಯಕ್ಷರು, ಉಪಾಧ್ಯಕ್ಷರು, ಧರ್ಮದರ್ಶಿಗಳು ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿರಸಿಯ ಅಧಿಕಾರಿಗಳು ಎಲ್ಲರೂ ಸೇರಿ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
.

About The Author

error: Content is protected !!